ಹಾಸನ: ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರ ಹಾಗೂ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ

ಹೇಮಾವತಿ ಪ್ರತಿಮೆ ಎದುರು ಸಂಘಟಿತರಾದ ನೂರಾರು ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಮೆರವಣಿಗೆಯಲ್ಲಿ ಸಾಗಿ ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದರು ಆಗಮಿಸಿ ಕೆಲಕಾಲ ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.