ಹಾಸನ, ಏಪ್ರಿಲ್ 16:ಜಿಲ್ಲೆಯ ಈಶ್ವರಹಳ್ಳಿ ಗ್ರಾಮದ ಶ್ರೀಯುತ ಇ.ಎಂ. ಕೋಮಲೇಶ್ ಅವರು ಇಂದು ನಿಧನರಾಗಿದ್ದಾರೆ.
ಅವರು ಕೆಲಕಾಲದಿಂದ ಅಸ್ವಸ್ಥರಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರ ನಿಧನದಿಂದ ಕುಟುಂಬಸ್ಥರು, ಬಂಧುಬಳಗ ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ಆವರಿಸಿದೆ.
ಮೃತರು ಪತ್ನಿ, ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.ಅವರ ಅಂತ್ಯಕ್ರಿಯೆ ಇಂದು ಸಂಜೆ ಗ್ರಾಮದಲ್ಲೇ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.ಸ್ಥಳೀಯರು ಹಾಗೂ ಸ್ನೇಹಿತರು ಕೋಮಲೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
