ಹಾಸನ : ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡ ಅವರ ಆಪ್ತರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾಗಿದ್ದ ದಿವಂಗತ ಪಟೇಲ್ ಶಿವರಾಮ್ ಅವರ 77ನೇ ಜನ್ಮದಿನವನ್ನು ಪಟೇಲ್ ಶಿವರಾಮ್ ಅಭಿಮಾನಿ ಬಳಗದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಕಾಮಧೇನು ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರ ಸಮಕ್ಷಮದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶಿವರಾಮ್ ಅವರ ಸೇವಾ ಮನೋಭಾವ ಹಾಗೂ ಸಮಾಜಮುಖಿ ಕಾರ್ಯಗಳನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ವೃದ್ಧಾಶ್ರಮದ ನಿವಾಸಿಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸಿ, ಅವರೊಂದಿಗೆ ಸಮಯ ಕಳೆಯುವ ಮೂಲಕ ಜನ್ಮದಿನವನ್ನು ವಿಶೇಷವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಲಾಸ್ ಪಟೇಲ್, ಮಯಾಂಕ್ ಗೌಡ, ಪ್ರತಾಪ್ ಗೌಡ, ಎಂ.ಎನ್. ಅನಿಲ್, ಬಿ.ಡಿ. ಕುಮಾರ್, ಅಟ್ಟವರ ನಾಗರಾಜು, ನಾಗತಿಹಳ್ಳಿ ಸಿನಾ, ಚೇತನ್, ಜೀವನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
