ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಹೋಬಳಿಯ ಸೋಮನಹಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಗಂಭೀರ ವಿದ್ಯುತ್ ಅವಘಡ ಸಂಭವಿಸಿದೆ. ಹಳೇ ವಿದ್ಯುತ್ ಕಂಬವನ್ನು ಬದಲಿಸುವ ಕಾರ್ಯ ನಡೆಯುತ್ತಿದ್ದ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಇನ್ನೊಬ್ಬ ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿಯನ್ನು ಕೇರೆಗೋಡು ಗ್ರಾಮದ ರವಿ (45) ಎಂದು ಗುರುತಿಸಲಾಗಿದೆ. ಗಾಯಗೊಂಡವನು ಲೋಕೇಶ್, ಇಬ್ಬರೂ ಕೂಲಿ ಕಾರ್ಮಿಕರಾಗಿದ್ದು, ಕೆಲಸಕ್ಕೆ ಕರೆ ತಂದಿದ್ದು ಗುತ್ತಿಗೆದಾರ ರೇಣುಕಾ ಎನ್ನಲಾಗಿದೆ.
ಇದನ್ನು ಓದಿ:-ಬೇಲೂರು – ದ್ವಾರಸಮುದ್ರ ಕೆರೆಯಲ್ಲಿ ಈಜಲು ತೆರಳಿದ ಯುವಕನ ಸಾವು
ಬಾರಿ ಮಳೆ ಮತ್ತು ಗಾಳಿಯ ಹಿನ್ನಲೆಯಲ್ಲಿ ಹಳೇ ಕಂಬಗಳನ್ನು ಬದಲಿಸಿ ಹೊಸ ಕಂಬಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದ್ದಾಗ, ಹಗ್ಗ ಹಿಡಿದು ನಿಂತಿದ್ದ ರವಿ ಹಾಗೂ ಲೋಕೇಶ್ ಮೇಲೆ ಕಂಬ ಏಕಾಏಕಿ ಮುರಿದು ಬಿದ್ದಿದೆ. ರವಿಯು ಸ್ಥಳದಲ್ಲೇ ಪ್ರಾಣತ್ಯಾಗ ಮಾಡಿದ್ದು, ಗಾಯಗೊಂಡ ಲೋಕೇಶ್ಗೆ ಹಳ್ಳಿಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಹಳ್ಳಿಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಸ್ಥಳೀಯರು ದುಃಖ ವ್ಯಕ್ತಪಡಿಸಿದ್ದು, ಸುರಕ್ಷತಾ ಕ್ರಮಗಳಿಲ್ಲದ ಕಾಮಗಾರಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

[…] […]