ಹಾಸನ: ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಸನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೆಡ್ ಕ್ರಾಸ್, ಎಲ್ಲಾ ರೋಟರಿ ಕ್ಲಬ್ಗಳು, ಎಲ್ಲಾ ಲಯನ್ಸ್ ಕ್ಲಬ್ಗಳು ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಯುವಜನೋತ್ಸವ-2025ರ ಅಂಗವಾಗಿ ಜಿಲ್ಲಾ ಮಟ್ಟದ “ಮ್ಯಾರಥಾನ್ ಸ್ಪರ್ಧೆ-2025” ಹಾಗೂ “ಬೈಕ್ ರಾಲಿ-2025” (ಎಚ್.ಐ.ವಿ/ಏಡ್ಸ್ ಜಾಗೃತಿ) ಹಮ್ಮಿಕೊಳ್ಳಲಾಯಿತು.

ಬೆಳಿಗ್ಗೆ ನಡೆದ ಮ್ಯಾರಥಾನ್ ಸ್ಪರ್ಧೆಯಲ್ಲಿ 100 ಕ್ಕೂ ಹೆಚ್ಚು ಮಂದಿ ಸ್ಪರ್ಧಿಗಳು ಉತ್ಸಾಹದಿಂದ ಪಾಲ್ಗೊಂಡರು. ನಂತರ ನಡೆದ ಬೈಕ್ ರಾಲಿಯಲ್ಲಿ 50 ಕ್ಕೂ ಹೆಚ್ಚು ಬೈಕ್ ಸವಾರರು ಭಾಗವಹಿಸಿ, ಏಡ್ಸ್ ಜಾಗೃತಿಯ ಸಂದೇಶವನ್ನು ಸಾರ್ವಜನಿಕರಲ್ಲಿ ಹರಡಿದರು.
ಕಾರ್ಯಕ್ರಮದ ಅಂಗವಾಗಿ ಎಚ್.ಐ.ವಿ./ಏಡ್ಸ್ ಜಾಗೃತಿಗೆ ಸಂಬಂಧಿಸಿದ ಪೋಸ್ಟರ್ಗಳನ್ನು ಬಿಡುಗಡೆ ಮಾಡಿ, ಮ್ಯಾರಥಾನ್ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ನ್ಯಾಯಾಧೀಶೆ ಶ್ರೀಮತಿ ದ್ರಾಕ್ಷಾಯಿಣಿ ಜಿ.ಕೆ., ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅನಿಲ್ ಎಚ್., ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಿಜಯ್ ಗೊರೂರು, ರೋಟರಿ ಅಸಿಸ್ಟೆಂಟ್ ಗವರ್ನರ್ ಜೆ.ಎನ್. ಮಂಜುನಾಥ್, ರೋಟರಿ ಮಿಡ್ ಟೌನ್ ಅಧ್ಯಕ್ಷ ರೋ. ಸಿದ್ದೇಶ್, ಐಎಫ್ಎಂಆರ್ ಅಧ್ಯಕ್ಷ ಪ್ರಸನ್ನ ಕುಮಾರ್, ರೋಟರಿ ಸನ್ ರೈಸ್ ಕಾರ್ಯದರ್ಶಿ ಕೆ.ಎಸ್. ಯೋಗೇಶ್, ರೋ. ರಾಜೇಶ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದ ಎಲ್ಲ ಸಂಘ ಸಂಸ್ಥೆಗಳಿಗೆ ಹಾಗೂ ಸ್ವಯಂಸೇವಕರಿಗೆ ಆಯೋಜಕರು ಧನ್ಯವಾದಗಳನ್ನು ಅರ್ಪಿಸಿದರು.
