ಹಾಸನ: ಡಿಸೆಂಬರ್ 2ರಿಂದ 12, 2026ರವರೆಗೆ ಹಾಸನದಲ್ಲಿ ನಡೆಯಲಿರುವ ಶ್ರೀ ರಂಭಾಪುರಿ ಶ್ರೀಗಳ ಧಾರ್ಮಿಕ ಸಭೆಗೆ ಮುಖ್ಯ ಅತಿಥಿಗಳಾಗಿ ಆಗಮಿಸುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಘಟಕದ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರ ಖಂಡ್ರೆ ಮತ್ತು ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷರಾದ ಶಂಕರ ಬಿದರಿ, ಐಪಿಎಸ್ ಅವರನ್ನು ಭೇಟಿ ಮಾಡಿ ಆಹ್ವಾನಿಸಲಾಯಿತು.
ಧಾರ್ಮಿಕ ಸಭೆಯ ಹಿನ್ನೆಲೆಯಲ್ಲಿ ಮಹಾಸಭಾದ ಪದಾಧಿಕಾರಿಗಳು ಇಬ್ಬರು ಗಣ್ಯರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಹಾಸನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪ್ರಭಾರಿ ಜಿಲ್ಲಾ ಅಧ್ಯಕ್ಷರಾದ ಪುನೀತ್ ಪಟೇಲ್, ಹಾಸನ ತಾಲ್ಲೂಕು ಘಟಕದ ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್, ಹಾಸನ ಮಹಾನಗರ ಪಾಲಿಕೆ ಸಮಿತಿಯ ಅಧ್ಯಕ್ಷರಾದ ಹೆಚ್.ವಿ. ರೋಹಿತ್, ನಿರ್ದೇಶಕರಾದ ಡಿ.ವಿ. ಮದನ್, ಚನ್ನರಾಯಪಟ್ಟಣ ತಾಲ್ಲೂಕು ಅಧ್ಯಕ್ಷರಾದ ರಾಜಣ್ಣ, ನಿರ್ದೇಶಕರಾದ ಮಂಜುನಾಥ್, ಮಂಚೇನಹಳ್ಳಿ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
