ಹಾಸನ, ಜು. 6: ಡಾ. ವೈ.ಎಸ್. ವೀರಭದ್ರಪ್ಪ ಅವರ ಕೃತಿ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭದ ಅಂಗವಾಗಿ ಹಾಸನ ಲೋಕಸಭಾ ಸದಸ್ಯ ಶ್ರೇಯಸ್ ಎಂ. ಪಟೇಲ್ ಹಾಗೂ ಮಾಜಿ ಸಚಿವರು ಮತ್ತು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಸೋಮವಾರ ಆಹ್ವಾನ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಮುಖಂಡರು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿ, ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಈ ವೇಳೆ ಹಾಸನ ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಕೆ. ಮಂಜುನಾಥ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹೆಚ್.ಎಲ್. ಮಲ್ಲೇಶಗೌಡ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಸನ ತಾಲ್ಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
