ಹಾಸನ: ಹಾಸನ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದ ಶ್ರೇಯಸ್ ಎಂ. ಪಟೇಲ್ ಅವರಿಗೆ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯಿಂದ (ಎಐಸಿಸಿ) ಮಹತ್ವದ ಜವಾಬ್ದಾರಿ ವಹಿಸಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹೊರಡಿಸಿರುವ ಆದೇಶದಂತೆ, ಶ್ರೇಯಸ್ ಪಟೇಲ್ ಅವರನ್ನು ಸಂಘಟನ್ ಶ್ರೀಜನ್ ಅಭಿಯಾನ ಅಂಗವಾಗಿ ಓಡಿಶಾ ರಾಜ್ಯ ಕಾಂಗ್ರೆಸ್ ಘಟಕದ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
ಕಿರಿಯ ವಯಸ್ಸಿನಲ್ಲಿಯೇ ಇಂತಹ ದೊಡ್ಡ ಜವಾಬ್ದಾರಿ ಸಿಕ್ಕಿರುವುದು ಹಾಸನ ಜಿಲ್ಲೆಯವರಿಗೆ ಹೆಮ್ಮೆ ಹಾಗೂ ಸಂತಸದ ಸಂಗತಿ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹರ್ಷ ವ್ಯಕ್ತಪಡಿಸಿದೆ.
“ಈ ಜವಾಬ್ದಾರಿ ಸಂಸದರ ಪಕ್ಷ ನಿಷ್ಠೆ, ಪರಿಶ್ರಮ ಹಾಗೂ ಸಂಘಟನಾ ಶಕ್ತಿಗೆ ದೊರೆತ ಮಾನ್ಯತೆ” ಎಂದು ಜಿಲ್ಲೆಯ ಹಲವು ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿ, ಶ್ರೇಯಸ್ ಪಟೇಲ್ ಅವರಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
