ಹಾಸನ: ರೋಟರಿ ಕ್ಲಬ್ ಆಫ್ ಹಾಸನ ಸನ್ರೈಸ್ ಹಾಗೂ ಹಾಸನ ತಾಲೂಕು ಛಾಯಾಗ್ರಾಹಕರ ಸಂಘದ ಸಂಯುಕ್ತ ಆಶ್ರಯದಲ್ಲಿ ನಗರದ ಕಾಮಧೇನು ವೃದ್ಧಾಶ್ರಮದಲ್ಲಿ ಛಾಯಾಗ್ರಾಹಕ ದಿನಾಚರಣೆ ಹಾಗೂ ಛಾಯಾಗ್ರಾಹಕರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಛಾಯಾಗ್ರಾಹಕರ ಸಂಘದ ಜಿಲ್ಲಾಧ್ಯಕ್ಷ ನಿಂಗರಾಜು (ಸ್ವಾಮಿ) ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಅಧ್ಯಕ್ಷ ರೋ. ಕೆ.ಎಸ್. ಯೋಗೇಶ್ ಅವರು ಛಾಯಾಗ್ರಾಹಕರ ಸಾಧನೆ ಹಾಗೂ ವೃತ್ತಿಯ ಮಹತ್ವದ ಕುರಿತು ಮಾತನಾಡಿ, ಛಾಯಾಗ್ರಾಹಕ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಕಾಮಧೇನು ವೃದ್ಧಾಶ್ರಮದ ನಿವಾಸಿಗಳಿಗೆ ಬೆಳಗಿನ ಉಪಹಾರವನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ವತಿಯಿಂದ ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳು ಹಾಗೂ ಛಾಯಾಗ್ರಾಹಕರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಲಬ್ನ ಜಂಟಿ ಕಾರ್ಯದರ್ಶಿ ರೋ. ರಾಜೇಶ್, ಹಾಸನ ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ನಾಗರಾಜ್ ಎಸ್.ಜಿ., ನಿರ್ದೇಶಕರಾದ ಮನು, ದೀಪು, ವೇಣು, ಗಿರೀಶ್, ಇಂದ್ರಕುಮಾರ್, ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ ರೋಟರಿ ಕ್ಲಬ್ ಆಫ್ ಹಾಸನ ಸನ್ರೈಸ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
