ಹಾಸನ: ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ಕಬ್ಬಡಿ ಕ್ರೀಡಾಕೂಟದಲ್ಲಿ ಹಾಸನ ಜಿಲ್ಲೆಯನ್ನು ಪ್ರತಿನಿಧಿಸಲು ನಗರದ PRIDE PU & DEGREE COLLEGEನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಶಾಲಿನಿ ಹೆಚ್.ಎನ್. ಆಯ್ಕೆಯಾಗಿದ್ದಾರೆ.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರುವ ಮೂಲಕ ಶಾಲಿನಿ ಅವರು ಕಾಲೇಜಿಗೆ ಹಾಗೂ ಹಾಸನ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಾಸನ ಜಿಲ್ಲೆ ಹಾಗೂ ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂದು ಶುಭ ಹಾರೈಸಿದ್ದಾರೆ.
