ಹಾಸನ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಕಲಿಕೆಯ ಸಾಮಥ್ರ್ಯ ವೃದ್ಧಿಗೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ತಿಳಿಸಿದರು.
ಬಾಲಕಿಯರ ಸರ್ಕಾರಿ ವಿಭಜಿತ ಪ್ರೌಢಶಾಲೆಯಲ್ಲಿ ಪ್ರೈಡೇಪ್ರೆಂಡ್ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಯ ಮಕ್ಕಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು ಪ್ರತಿಯೊಂದು ಮಗುವಿಗೂ ಪ್ರಾಥಮಿಕ ಶಿಕ್ಷಣ ಕಡ್ಡಾಯ, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಅತ್ಯಗತ್ಯ ಎಂದರು.
ಮಕ್ಕಳ ಸುರಕ್ಷತೆ ಬಹುಮುಖ್ಯ ಎಂದ ಅವರು ಬಾಲ್ಯವಿವಾಹ, ಬಾಲ ಗರ್ಭೀಣಿ, ಫೋಕ್ಸೋಕಾಯ್ದೆ ಬಗ್ಗೆ ತಿಳುವಳಿಕೆ ಇರಬೇಕು ಶಿಸ್ತು ಮತ್ತು ಶ್ರದ್ದೆಯಿಂದ ಕಲಿಯುವುದನ್ನು ಅಳವಡಿಸಿಕೊಳ್ಳಬೇಕು. 18 ವರ್ಷದೊಳಗಿನ ಪ್ರತಿಯೊಂದು ಮಕ್ಕಳು ಮೊಬೈಲ್ ಬಳಕೆ ಮಾಡದಂತೆ ತಿಳಿಸಿದರಲ್ಲದೆ, ಸಾಮಾಜಿಕ ಜಾಲತಾಣಗಳ ಬಳಕೆಯಿಂದ ದೂರವಿರುವಂತೆ ತಿಳಿಸಿದರು. ಶಿಕ್ಷಕರು ಸಹ ಶಾಲಾ ಅವಧಿಯಲ್ಲಿ ಮೊಬೈಲ್ ಬಳಕೆ ಮಾಡದಂತೆ ಸೂಚಿಸಿದರು.
ಶಿಸ್ತುಬದ್ಧ ಜೀವನಕ್ಕೆ ಮೊದಲ ಆದ್ಯತೆ ನೀಡಬೇಕು. ಕಠಿಣ ಪರಿಶ್ರಮ ಮತ್ತು ಶಿಸ್ತಿನಿಂದ ಅತ್ಯುತ್ತಮ ವ್ಯಕ್ತಿಯಾಗಬಹು ದುಎಂದಅವರುದೇಶವನ್ನು ಅರಿತುಕೊಳ್ಳಲು ಮತ್ತು ಸರಿಯಾದ ರೀತಿಯಲ್ಲಿ ಜೀವನ ನಡೆಸಲು ಶಿಕ್ಷಣ ಅಗತ್ಯವಿದೆ ಎಂದು ತಿಳಿಸಿದರು.
ಕಳೆದ ಬಾರಿ ಹಾಸನ ಜಿಲ್ಲೆಯು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯದಲ್ಲಿ 6 ಸ್ಥಾನ ಪಡೆದಿದೆ. ಈ ಬಾರಿ ಇನ್ನೂ ಉತ್ತಮ ಸ್ಥಾನ ಪಡೆಯಲು ಎಲ್ಲರೂ ಪ್ರಯತ್ನಿಸಬೇಕು ಎಂದು ತಿಳಿಸಿದರು.
ಮಕ್ಕಳು ನೆನಪಿಟ್ಟುಕೊಳ್ಳಲು ಹೇಗೆ ಓದಬೇಕು ಎಂಬುವುದರ ಬಗ್ಗೆ ಮಾರ್ಗದರ್ಶನ ನೀಡುವುದರ ಜೊತೆಗೆ ಮುಂದೆ ಯಾವ ವಿಷಯ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ನಡೆಸಿ ಯಾವ ವೃತ್ತಿಯಲ್ಲಿ ತೊಡಗಿಸಿಕೊಳ್ಳಬಹುದು ಎಂಬುದರ ಬಗ್ಗೆಯೂ ಪ್ರೌಢ ಶಾಲೆಯ ಹಂತದಲ್ಲಿಯೇ ಮಕ್ಕಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
