ಹಾಸನ: ಕರ್ನಾಟಕ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರಿಂದ ಪ್ರತಿಭಟನೆ

ಹಾಸನ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಶಿಕ್ಷಣದಲ್ಲಿ ಹಿಂದಿಯನ್ನು ತೃತೀಯ ಭಾಷೆಯಾಗಿ ಕಡ್ಡಾಯವಾಗಿರಿಸಿರುವ ರಾಜ್ಯ ಪಠ್ಯಕ್ರಮವನ್ನು ತೀವ್ರವಾಗಿ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.