ಹಾಸನ: ಸಂಸದ ಶ್ರೇಯಸ್ ಪಟೇಲ್ ಅವರು, ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಅಫಿಡವಿಟ್ ಸಲ್ಲಿಸುವ ವೇಳೆ ಆಸ್ತಿ ವಿವರ ಬಚ್ಚಿಟ್ಟಿದ್ದ ಆರೋಪದ ತಕಾರಾರು ಅರ್ಜಿಯ ವಿಚಾರಣೆಗೆ ಹೈಕೋರ್ಟ್ ಸಮ್ಮತಿಸಿದೆ ಎಂದು ವಕೀಲ ದೇವರಾಜೇಗೌಡ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶ್ರೇಯಸ್ ಪಟೇಲ್ ಅಪಾರ ಪ್ರಮಾಣದ ಅಕ್ರಮ ಆಸ್ತಿಗಳಿಸಿದ್ದು, ಬೇನಾಮಿ ಆಸ್ತಿ ಸಹ ಮಾಡಿದ್ದಾರೆ. ಇದರ ಬಗ್ಗೆ ಅಫಿಡವಿಟ್ನಲ್ಲಿ ಮಾಹಿತಿ ನೀಡಿರಲಿಲ್ಲ. ಜೊತೆಗೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಎಂಪಿ ಚುನಾವಣೆ ವೇಳೆ ಕೋಟಿ ಕೋಟಿ ಹಣ ಹಂಚಿಕೆ ಮಾಡಿರುವ ಆಡಿಯೋ ವೈರಲ್ ಆಗಿತ್ತು. ಈ ಎಲ್ಲ ಅಂಶಗಳನ್ನು ಆಧರಿಸಿ ಹೈಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು. ಇದನ್ನು ರದ್ದು ಮಾಡುವಂತೆ ಶ್ರೇಯಸ್ ಪಟೇಲ್ ಅವರೂ ರಿಟ್ ಅರ್ಜಿ ಹಾಕಿದ್ದರು.
ಅದನ್ನು ತಿರಸ್ಕರಿಸುವ ಹೈಕೋರ್ಟ್, ನಮ್ಮ ಅರ್ಜಿಯ ವಿಚಾರಣೆ ನಡೆಸಲು ಸಮ್ಮತಿಸಿದೆ. ವಿಚಾರಣೆ ನಂತರ ನ್ಯಾಯ ಸಿಗುವ ವಿಶ್ವಾಸ ಇದೆ ಎಂದರು.
