ಹಾಸನ, ಜೂನ್ 4: ತಾಲೂಕಿನ ಬ್ಯಾಡ್ರಳ್ಳಿ ಗ್ರಾಮದ ಕೆರೆ ಕೋಡಿ ಅಮ್ಮ ದೇವಸ್ಥಾನದ ಉದ್ಘಾಟನೆ, ಕಳಶಾರೋಹಣ ಹಾಗೂ ಧಾರ್ಮಿಕ ಸಮಾರಂಭದ ಅಂಗವಾಗಿ ಮೊದಲ ಆಹ್ವಾನ ಪತ್ರಿಕೆಯನ್ನು Siddalinga Swamiji ಅವರಿಗೆ ಸಲ್ಲಿಸಲಾಯಿತು.
ಜೂನ್ 18, 2026ರಂದು ನಡೆಯಲಿರುವ ದೇವಸ್ಥಾನದ ಕಳಶಾರೋಹಣ ಹಾಗೂ ಧಾರ್ಮಿಕ ಸಮಾರಂಭದ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ಗುರುವಾರ ತುಮಕೂರಿನ Siddaganga Mathಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಆಹ್ವಾನ ಪತ್ರಿಕೆ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ, ಧಾರ್ಮಿಕ ಕಾರ್ಯಕ್ರಮಗಳ ಯಶಸ್ವಿ ಆಯೋಜನೆ ಹಾಗೂ ಗ್ರಾಮದಲ್ಲಿ ಶಾಂತಿ, ಸಮೃದ್ಧಿ ನೆಲೆಸಲೆಂದು ಶ್ರೀಗಳು ಶುಭ ಹಾರೈಸಿದರು. ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.
ಬ್ಯಾಡ್ರಳ್ಳಿ ಗ್ರಾಮದ ಕೆರೆ ಕೋಡಿ ಅಮ್ಮ ದೇವಸ್ಥಾನದ ಕಳಶಾರೋಹಣ ಹಾಗೂ ಧಾರ್ಮಿಕ ಸಭೆಯು ಜೂನ್ 18ರಂದು ವಿವಿಧ ಪೂಜಾ ವಿಧಿವಿಧಾನಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಲಿದ್ದು, ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಈ ವೇಳೆ ದೇವಸ್ಥಾನ ಸಮಿತಿ ಸದಸ್ಯರು, ಗ್ರಾಮ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
- ಶಿವಕುಮಾರ್ ಕಟ್ಟಾಯ
