ಹಾಸನ – ಸತತವಾಗಿ ಎರಡನೇ ಬಾರಿಗೆ ದ್ವಿತೀಯ ರ್ಯಾಂಕ್ ನ್ನು ಸ್ಟೂಡೆಂಟ್ಸ್ ಪದವಿ ಪೂರ್ವ ಕಾಲೇಜು ಪಡೆದುಕೊಂಡಿದೆ.
ದ್ವಿತೀಯ ಪಿಯುಸಿ 2025 ರ ವಾರ್ಷಿಕ ಪರೀಕ್ಷೆಯಲ್ಲಿ 593 ಅಂಕ ಪಡೆದಿದ್ದ ಸ್ಟೂಡೆಂಟ್ಸ್ ಪದವಿ ಪೂರ್ವ ಕಾಲೇಜಿನ ಅಮೂಲ್ಯ ಎಚ್. ಪಿ ಮರು ಮೌಲ್ಯಮಾಪನದಲ್ಲಿ ಇಂಗ್ಲೀಷ್ ಭಾಷಾ ವಿಷಯದಲ್ಲಿ 98 ಅಂಕಗಳನ್ನು ಗಳಿಸುವ ಮೂಲಕ ಒಟ್ಟು 594 ಅಂಕ ಪಡೆದುಕೊಂಡು ಹಾಸನ ಜಿಲ್ಲೆಗೆ ಎರಡನೇ ರ್ಯಾಂಕ್ ಮತ್ತು ರಾಜ್ಯದಲ್ಲಿ ಐದನೇ ರ್ಯಾಂಕ್ ಪಡೆಯುವ ಮೂಲಕ ಕಾಲೇಜಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮತ್ತು ಇಂಗ್ಲೀಷ್ ಭಾಷಾ ವಿಷಯದಲ್ಲಿ 98 ಅಂಕಗಳನ್ನು ಪಡೆದು ಜಿಲ್ಲೆಯಲ್ಲಿ ಇಂಗ್ಲಿಷ್ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
