ಹಾಸನ: ಕರ್ನಾಟಕದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ಆರ್ಐ ಕೋಟಾವನ್ನು ರದ್ದುಪಡಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಹೇಮಾವತಿ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಎಐಡಿಎಸ್ಓ ಜಿಲ್ಲಾ ಘಟಕದ ಸಂಚಾಲಕಿ ಚೈತ್ರಾ ಅವರು ಮಾತನಾಡಿ “ರಾಜ್ಯ ಸರ್ಕಾರವು ಪ್ರತಿ ಸೀಟಿಗೆ ೨೫ ಲಕ್ಷ ರೂ.ಗಳ ದುಬಾರಿ ಶುಲ್ಕದೊಂದಿಗೆ ೧೫% ಎನ್ಆರ್ಐ ಕೋಟಾವನ್ನು ಆರಂಭಿಸಲು ನಿರ್ಧರಿಸಿರುವುದು ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಹಕ್ಕುಗಳನ್ನು ಹರಾಜು ಹಾಕುವಂತಾಗಿದೆ. ಸರ್ಕಾರಿ ಸೀಟುಗಳನ್ನು ಶ್ರೀಮಂತರ ಪಾಲಾಗಿಸುವ ಈ ಕ್ರಮವು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣದತ್ತ ತಳ್ಳುತ್ತಿದೆ” ಎಂದು ಆರೋಪಿಸಿದರು.
ಈಗಾಗಲೇ ರಾಜ್ಯದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಶುಲ್ಕ ದೇಶದಲ್ಲಿಯೇ ಅತಿ ಹೆಚ್ಚಿನದು. ವಿದ್ಯಾರ್ಥಿಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಬದಲು ಸರ್ಕಾರವು ಇನ್ನಷ್ಟು ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದು, ವೈದ್ಯಕೀಯ ಕಾಲೇಜುಗಳನ್ನು ಬಲಪಡಿಸಲು ಅಗತ್ಯವಿರುವ ನಿಧಿಯನ್ನು ರಾಜ್ಯ ಬೊಕ್ಕಸದಿಂದ ಮಂಜೂರು ಮಾಡುವ ಜವಾಬ್ದಾರಿ ತಪ್ಪಿಸುತ್ತಿದೆ ಎಂದು ದೂರಿದರು.
“ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ೧೨,೪೪೭ ಬೋಧಕ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ, ಮೂಲ ಸೌಕರ್ಯವನ್ನು ಬಲಪಡಿಸಬೇಕು. ವಿದ್ಯಾರ್ಥಿ ವಿರೋಧಿ ಮತ್ತು ಜನವಿರೋಧಿ ಕ್ರಮವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಘಟಕದ ಕಾರ್ಯಕರ್ತರಾದ ಸುಷ್ಮಾ, ತಿಲಕ್ ಸೇರಿದಂತೆ ನೂರಾರು ವಿದ್ಯಾರ್ಥಿ ಗಳು ಭಾಗವಹಿಸಿದ್ದ

[…] […]