ಹಾಸನ: “ವಿಶ್ವ ಹಸಿವು ದಿನ” ಅಂಗವಾಗಿ ರೋಟರಿ ಕ್ಲಬ್ ಹಾಸನ್ ಸನ್ ರೈಸ್ ವತಿಯಿಂದ ನಗರದ ಎಸ್.ಎಂ. ಕೃಷ್ಣನಗರ ಬಡಾವಣೆ ಹಾಗೂ ಅರಸೀಕೆರೆ ಮುಖ್ಯರಸ್ತೆ ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಡುತ್ತಿದ್ದ ಕೂಲಿ ಕಾರ್ಮಿಕರಿಗೆ ಮಧ್ಯಾಹ್ನದ ಊಟ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ದಿನಾಚರಣೆ ನಡೆಸಲಾಯಿತು.
ಕಾರ್ಮಿಕರಿಗೆ ಆಹಾರ ವಿತರಿಸುವ ಮೂಲಕ ಹಸಿವು ನಿವಾರಣೆ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ಸಾರಿದ ರೋಟರಿ ಕ್ಲಬ್ ಸದಸ್ಯರು, ಸಮಾಜ ಸೇವೆಯೇ ಸಂಘಟನೆಯ ಮುಖ್ಯ ಉದ್ದೇಶ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಹಾಸನ್ ಸನ್ ರೈಸ್ ಅಧ್ಯಕ್ಷ ರೋ. ವಜ್ರಕುಮಾರ್ ಎಚ್.ಡಿ., ಕಾರ್ಯದರ್ಶಿ ರೋ. ಯೋಗೇಶ್ ಕೆ.ಎಸ್. ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಯಿತು.
