ಹಾಸನ: ಶ್ರೀ ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿಯ ದರ್ಶನವನ್ನು ಅಕ್ಟೋಬರ್ 4ರಂದು ಕೊಡಗು ಜಿಲ್ಲೆಯ ವಿವಿಧ ಮಠಗಳ ಸ್ವಾಮೀಜಿಗಳು ಪಡೆದರು.
ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಅರಮೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಕೊಡಗು ಜಿಲ್ಲೆಯ ಮಠಾಧೀಶರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಹಾಸನ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಬಿಜೆಪಿ ಮುಖಂಡ ಎಚ್.ಎನ್. ನಾಗೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
- ಶಿವಕುಮಾರ್ ಕಟ್ಟಾಯ
