ಬೆಂಗಳೂರು, ಜೂನ್ 25: ರಾಜ್ಯ ಆರೋಗ್ಯ ಇಲಾಖೆಯು ತೀರ್ಮಾನ ಕೈಗೊಂಡಿದ್ದು, ಅಸುರಕ್ಷಿತವೆಂದು ಗುರುತಿಸಲ್ಪಟ್ಟ ಕಾಂತಿವರ್ಧಕ ಔಷಧಗಳು ಮತ್ತು ಇತರ ಔಷಧಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೇ ತಿಂಗಳಲ್ಲಿ ವಿವಿಧ ಕಂಪನಿಗಳಿಂದ ತೆಗೆದು ಪರೀಕ್ಷೆಗೆ ಒಳಪಡಿಸಲಾದ ಮಾದರಿಗಳ ಪೈಕಿ, ಒಟ್ಟು 15 ಔಷಧಗಳು ಅಸುರಕ್ಷಿತವೆಂದು ದೃಢಪಟ್ಟಿದೆ.
ಈ ಪಟ್ಟಿಯಲ್ಲಿ ಮೈಸೂರಿನ “ಓ ಶಾಂತಿ ಗೋಲ್ಡ್ ಕುಂಕುಮ್” ಸೇರಿದಂತೆ ರಾಜ್ಯ ಮತ್ತು ಹೊರ ರಾಜ್ಯದ ಹಲವು ಪ್ರಸಿದ್ಧ ಕಂಪನಿಗಳ ಉತ್ಪನ್ನಗಳು ಸೇರಿವೆ. ಆರೋಗ್ಯ ಇಲಾಖೆಯು ಈ ಔಷಧಗಳ ಮಾರಾಟ, ವಿತರಣಾ ಹಾಗೂ ಬಳಕೆಯನ್ನು ತಕ್ಷಣದಿಂದ ನಿಷೇಧಿಸುವಂತೆ ಸುತ್ತೋಲೆ ಹೊರಡಿಸಿದೆ.
ಅಸುರಕ್ಷಿತ ಎಂದು ಗುರುತಿಸಲ್ಪಟ್ಟ ಪ್ರಮುಖ ಔಷಧಗಳು:
-
- ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ – ಮೆ. ಅಲ್ಟ್ರಾ ಲ್ಯಾಬೋರೇಟರಿಸ್ ಪ್ರೈ. ಲಿಮಿಟೆಡ್.
- ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ – ಮೇ. ಟಾಮ್ ಬ್ರಾನ್ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.
- ಪೋಮೋಲ್-650 (ಪ್ಯಾರಾಸಿಟಮೋಲ್ ಟ್ಯಾಬ್ಲೆಟಸ್ ಐ.ಪಿ 650 ಎಂಜಿ)- ಮೇ. ಅಬಾನ್ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.
- ಮಿಟು ಕ್ಯೂ7 ಸಿರಪ್ – ಮೆ. ಬಯೋನ್ ಥೆರಾಪ್ಯಾಟಿಕ್ಸ್ ಇಂಡಿಯಾ ಪ್ರೈ. ಲಿಮಿಟೆಡ್
- ಸ್ಟೈರಲ್ ಡಿಲ್ಯೈಯಂಟ್ ಪಾರ್ ರೆಕಾನೋಸ್ಟಿಟಿಶ್ಯೂನ್ ಆಪ್ ಎನ್ಡಿ, ಐಬಿ, ಐಬಿಡಿ ಆ್ಯಂಡ್ ಕಾಂಬಿನೇಷನ್ ವ್ಯಾಕ್ಸಿನ್ಸ್ ಫಾರ್ ಪೌಲ್ಟ್ರೀ (ವೆಟರ್ನರಿ) ಮಲ್ಟಿ ಡೋಸ್ ವಿಲಾ 200 ಎಂಲ್ – ಮೇ. ಸೇಫ್ ಪೇರೆಂಟರಲ್ಸ್ ಪ್ರೈ. ಲಿಮಿಟೆಡ್.
- ಸ್ಪಾನ್ಪ್ಲಾಕ್ಸ್-ಓಡ್ ಟ್ಯಾಬ್ಲೆಟ್ಸ್ (ಓಪ್ಲಾಕ್ಸಸಿನ್ & ಓರ್ನಿಡಜೋಲ್ ಟ್ಯಾಬ್ಲೆಟ್ಸ್ ಐಪಿ) – ಮೆ. ಇಂಡೋರಾಮ ಹೇಲ್ತ್ ಕೇಸ್ ಪ್ರೈ ಲಿಮಿಟಿಡ್.
- ಪ್ಯಾಂಟೋಕೋಟ್-ಡಿಎಸ್ಆರ್ (ಪ್ಯಾಂಟೋಫ್ರಜೋಲ್ ಗ್ಯಾಸ್ಟ್ರೋ-ರಿಜಿಸ್ಟೆಂಟ್ & ಡೋಮ್ಫೆರಿಡನ್ ಪ್ರೋಕಾಂಗಡ್ ರಿಲಿಸ್ ಕ್ಯಾಪ್ಸೂಲ್ಸ್ ಐಪಿ – ಮೇ. ಸ್ವೆಫ್ನೆ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.
- ಸೋಡಿಯಂ ಕ್ಲೋರೈಡ್ ಇನ್ಜೆಕ್ಷನ್ ಐಪಿ 0.9% ಡಬ್ಲ್ಯೂ/ವಿ (ಎನ್ಎಸ್) – ಮೆ. ಪುನಿಷ್ಕ ಇನ್ಜೆಕ್ಟಬಲ್ ಪ್ರೈ. ಲಿಮಿಟೆಡ್
- ಸೋಡಿಯಂ ಕ್ಲೋರೈಡ್ ಇನ್ಜೆಕ್ಷನ್ ಐಪಿ 0.9% ಡಬ್ಲ್ಯೂ/ವಿ (ಎನ್ಎಸ್) – ಮೆ. ಪುನಿಷ್ಕ ಇನ್ಜೆಕ್ಟಬಲ್ ಪ್ರೈ. ಲಿಮಿಟೆಡ್.
- ಅಲ್ಪಾ ಲಿಪೋಯಿಕ್ ಆಸಿಡ್, ಪೋಲಿಕ್ ಆಸಿಡ್, ಮಿಥೈಲ್ ಕೋಬಾಲಮಿನ್, ವಿಟಮಿನ್ ಬಿ6 & ವಿಟಮಿನ್ ಡಿ3ಟ್ಯಾಬ್ಲೆಟ್ಸ್ – ಮೇ. ಇಸ್ಟ್ ಆಪ್ರಿಕನ್ (ಇಂಡಿಯಾ) ಓವರ್ಸಿಸ್.
- ಓ ಶಾಂತಿ ಗೋಲ್ಡ್ ಕ್ಲಾಸ್ ಕುಂಕುಮ್ – ಮೇ. ಎನ್. ರಂಗರಾವ್ & ಸನ್ಸ್ ಪ್ರೈ ಲಿಮಿಟೆಡ್.
- ಪಿರಾಸಿಡ್-ಓ ಸಸ್ಪೆನ್ಶನ್ (ಸಲ್ಕ್ರಾಲ್ಫೇಟ್ & ಆಕ್ಸೆಟಾಕೈನ್ ಸಸ್ಪೆನ್ಶನ್) – ಮೆ. ರೆಡ್ನಕ್ಸ್ ಫಾರ್ಮಾಸ್ಯೂಟಿಕಲ್ಸ್ ಪ್ರೈ ಲಿಮಿಟೆಡ್.
- ಗ್ಲಿಮಿಜ್-2 (ಗ್ಲಿಮಿಫೆರೈಡ್ ಟ್ಯಾಬ್ಲೆಟ್ಸ್ ಐಪಿ 2ಎಂಜಿ) – ಮೆ. ಕೆಎನ್ಎಂ ಫಾರ್ಮಾ ಪ್ರೈ. ಲಿಮಿಟೆಡ್.
- ಐರನ್ ಸುಕ್ರೋಸ್ ಇನ್ಜೆಕ್ಷನ್ ಯುಎಸ್ಪಿ 100ಎಂಜಿ (ಐರೋಗೈನ್) – ಮೆ. ರೀಗೈನ್ ಲ್ಯಾಬೋರೇಟರಿಸ್
- ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ (ರಿಂರ್ಗ ಲ್ಯಾಕ್ಟೆಟ್ ಸಲೂಷನ್ ಪಾರ್ ಇನ್ಜೆಕ್ಷನ್ ಆರ್ಎಲ್ – ಮೇ. ಒಟ್ಸುಕಾ ಫಾರ್ಮಾಸ್ಯೂಟಿಕಲ್ಸ್ ಇಂಡಿಯಾ
ಆಜ್ಞೆನಿಷ್ಠತೆ ಅಗತ್ಯ:
ಇವುಗಳನ್ನು ಮಾರಾಟ ಮಾಡುವ ಸಗಟು ಔಷಧ ವ್ಯಾಪಾರಿಗಳು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಮಾರಾಟ ಅಥವಾ ಬಳಕೆ ಮಾಡದಿರಬೇಕು ಎಂಬುದು ಆರೋಗ್ಯ ಇಲಾಖೆಯ ಸೂಚನೆ. ನಿಷೇಧ ಉಲ್ಲಂಘನೆಯು ಕಾನೂನು ಕ್ರಮಕ್ಕೆ ಕಾರಣವಾಗಬಹುದು.
ಪ್ರತಿ ಜಿಲ್ಲೆಗೆ ಕ್ಯಾನ್ಸರ್ ಆಸ್ಪತ್ರೆ ಯೋಜನೆ:
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು, ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಜೊತೆಗೆ ಒಂದು ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಗುರಿಯಾಗಿದೆಯೆಂದು ತಿಳಿಸಿದ್ದಾರೆ. ಹುಬ್ಬಳ್ಳಿ ಮತ್ತು ಬೆಳಗಾವಿಯ ಜಯದೇವ ಆಸ್ಪತ್ರೆಗಳು ಮುಂದಿನ ವರ್ಷ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿವೆ ಎಂದು ಅವರು ಹೇಳಿದರು.
