ಹಾಸನ, ಜೂನ್ 24: ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ, ಆಲೂರು ಹಾಗೂ ಅರಕಲಗೂಡು ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ತೀವ್ರ ಮಳೆಯ ಕಾರಣ ಮಕ್ಕಳ ಸುರಕ್ಷತೆಯನ್ನು ಪರಿಗಣಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳ ಹಾಜರಾತಿ ಸ್ಥಗಿತಗೊಳಿಸಲಾಗಿದೆ.
ಇದನ್ನು ಓದಿ-ರಾಮನಾಥಪುರ-ಸಾಲಬಾಧೆ ತಾಳಲಾರದೆ ರೈತರ ಆತ್ಮಹತ್ಯೆ: ಸಂಸದ ಶ್ರೇಯಸ್ ಪಟೇಲ್ ಸಂತಾಪ ಸೂಚನೆ
ಈಗಾಗಲೇ ಜೂನ್ 24ರಂದು ಸಕಲೇಶಪುರ ತಾಲ್ಲೂಕಿನಲ್ಲಿ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿತ್ತು. ಮುಂದುವರಿದ ಭಾರಿ ಮಳೆಗೆ ಕಾರಣವಾಗಿ ನಾಳೆ (ಜೂನ್ 25) ಆಲೂರು ಮತ್ತು ಅರಕಲಗೂಡು ತಾಲ್ಲೂಕುಗಳಿಗೂ ಇದೇ ಆದೇಶ ಅನ್ವಯವಾಗಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಜಿಲ್ಲಾಡಳಿತ ಸಾರ್ವಜನಿಕರಿಗೆ ಅನಾವಶ್ಯಕವಾಗಿ ಹೊರಗೆ ಹೋಗದಂತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ವಿನಂತಿಸಿದೆ.
