ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯ ಹಿನ್ನೆಲೆ: ಮೂರು ತಾಲ್ಲೂಕುಗಳಲ್ಲಿ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ

ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ, ಆಲೂರು ಹಾಗೂ ಅರಕಲಗೂಡು ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.