ಬೆಂಗಳೂರು: ರಾಜ್ಯದ ಹಲವೆಡೆ ಶನಿವಾರ ರಾತ್ರಿ ಭಾರೀ ಮಳೆಯಾಗಿದ್ದು, ಹಲವೆಡೆ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ. ಭಾನುವಾರ ಕೂಡ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಅಲ್ಲದೇ, ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
