ಹಾಸನ, ಜೂನ್ 17, 2025: ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಹೇಮಾವತಿ ಜಲಾಶಯದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಜಲಾನಯನ ಪ್ರದೇಶಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ, ಜಲಾಶಯದಲ್ಲಿ ಇದೀಗ ಕೇವಲ 12.75 ಅಡಿ ನೀರಿನ ಸಂಗ್ರಹಣೆಗೆ ಮಾತ್ರ ಸ್ಥಳಾವಕಾಶ ಉಳಿದಿದೆ.
ಇದರಿಂದ ಯಾವುದೇ ಸಮಯದಲ್ಲಾದರೂ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಹೇಮಾವತಿ ನದಿಪಾತ್ರ, ನದಿ ದಂಡೆ ಹಾಗೂ ಸುತ್ತಮುತ್ತಲಿನ ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಈ ಕುರಿತು ಹೇಮಾವತಿ ಯೋಜನಾ ವೃತ್ತದ ಸೂಪರಿಂಟೆಂಡೆಂಗ್ ಇಂಜಿನಿಯರ್ ಜ್ಯೋತಿ ಬಿ.ಕೆ. ಅವರು ಆದೇಶ ಹೊರಡಿಸಿದ್ದು, “ಜನರು ಎಚ್ಚರಿಕೆಯಿಂದ ಇರಬೇಕು. ಸ್ಥಳೀಯ ಆಡಳಿತ ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಹೇಳಿದ್ದಾರೆ.
ಸಾವಧಾನತೆ, ತ್ವರಿತ ಪ್ರತಿಕ್ರಿಯೆ ಮತ್ತು ಸ್ಥಳೀಯ ಸಹಕಾರದೊಂದಿಗೆ ಯಾವುದೇ ಅಪಾಯವನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಸಿ ವರ್ಗಾವಣೆ, ಲತಾ ಕುಮಾರಿ ಕೆ ಎಸ್. ನೂತನ ಡಿಸಿ

[…] […]