ಬೆಂಗಳೂರು: ‘ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಘೋಷಿಸಲು ಕೈಗೊಂಡಿರುವ ನಿರ್ಧಾರದ ಹಾದಿಯಲ್ಲೇ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರ ಘೋಷಿಸಬೇಕು’ ಎಂದು ‘ಬೆಂಗಳೂರು ವಕೀಲರ ಸಂಘ’ (ಎಎಬಿ) ಆಗ್ರಹಿಸಿದೆ.
ಈ ಕುರಿತಂತೆ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಚ್.ವಿ.ಪ್ರವೀಣ್ ಗೌಡ ಮತ್ತು ಖಜಾಂಚಿ ಶ್ವೇತಾ ರವಿಶಂಕರ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರಿಗೆ ಶುಕ್ರವಾರ ಎರಡು ಪುಟಗಳ ಪತ್ರ ಬರೆದಿದ್ದಾರೆ.
‘ಕೂಡಲೇ ಹೈಕೋರ್ಟ್ನ ಎಲ್ಲಾ ನ್ಯಾಯಮೂರ್ತಿಗಳ ಪೂರ್ಣಪೀಠದ ಸಭೆ ಕರೆದು ಎಲ್ಲರೂ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕ ಅವಗಾಹನೆಗೆ ತರಬೇಕು’ ಎಂದು ಒತ್ತಾಯಿಸಿದ್ದಾರೆ.
