ಕೊರಟಗೆರೆ :- ತಾಲೂಕಿನ ಹೊಳವನಹಳ್ಳಿ ವಿದ್ಯುತ್ ಉಪಸ್ಥಾವರದಲ್ಲಿ 12.5 MVA ಸಾಮರ್ಥ್ಯದ ವಿದ್ಯುತ್ ಪರಿವರ್ತಕ ಸುಟ್ಟು ಹಾನಿಗೊಂಡ ಹಿನ್ನೆಲೆ, ರೈತರು ಎದುರಿಸುತ್ತಿರುವ ಸಮಸ್ಯೆಗೆ ಗಂಭೀರವಾಗಿ ಸ್ಪಂದಿಸಿರುವ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಸಂಬಂಧ ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ವ್ಯವಸ್ಥಾಪಕ ನಿರ್ದೇಶಕರಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು, ಹಾನಿಗೊಂಡಿರುವ ಟ್ರಾನ್ಸ್ಫಾರ್ಮರ್ ಅನ್ನು ತಕ್ಷಣ ಸರಿಪಡಿಸಿ ಅಥವಾ ಹೊಸ ಪರಿವರ್ತಕ ಅಳವಡಿಸುವ ಮೂಲಕ ವಿದ್ಯುತ್ ಸರಬರಾಜನ್ನು ಶೀಘ್ರದಲ್ಲಿ ಪುನಃ ಸ್ಥಾಪಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ರೈತರ ಹಿತದೃಷ್ಟಿಯಿಂದ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದು, ತಾತ್ಕಾಲಿಕ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ಕೂಡ ಸೂಚಿಸಿದ್ದಾರೆ.
ಈ ಕ್ರಮದಿಂದ ಶೀಘ್ರದಲ್ಲೇ ಹೊಳವನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಸುಧಾರಿಸುವ ನಿರೀಕ್ಷೆ ವ್ಯಕ್ತವಾಗಿದೆ.
ಶ್ರೀನಿವಾಸ್ ಕೊರಟಗೆರೆ. ನ
