ಶ್ಲೋಕ – 01
ಭಗವಾನುವಾಚ
ಇಮಂ ವಿವಸ್ವತೇ ಯೋಗಂ ಪ್ರೋಕ್ತವಾನಹಮವ್ಯಯಮ್
ವಿವಸ್ವಾನ್ ಮನವೇ ಪ್ರಾಹ ಮನುರಿಕ್ಷ್ವಾಕವೇSಬ್ರವೀತ್
ಭಗವಾನ್ ಉವಾಚ-ಭಗವಂತ ಹೇಳಿದನು : – ಅಳಿವಿರದ ಈ ಸಾಧನ ಮಾರ್ಗವನ್ನು ನಾನು ಸೂರ್ಯನಿಗೆ ಹೇಳಿದ್ದೆ. ಸೂರ್ಯ ಮನುವಿಗೆ ಹೇಳಿದ್ದ. ಮನು ಇಕ್ಷ್ವಾಕುವಿಗೆ ಹೇಳಿದ್ದ.
ಹಿಂದೆ ಕೃಷ್ಣ ಜ್ಞಾನಮಾರ್ಗ ಮತ್ತು ಕರ್ಮಮಾರ್ಗದ ಬಗ್ಗೆ ಎರಡನೇ ಅಧ್ಯಾಯದಲ್ಲಿ ಪ್ರಸ್ತಾಪಿಸಿ, ಆ ನಂತರ ಮೂರನೇ ಅಧ್ಯಾಯದಲ್ಲಿ ಕರ್ಮಯೋಗದ ವಿಸ್ತಾರವನ್ನು ತಿಳಿಸಿದ. ನಾಲ್ಕನೇ ಅಧ್ಯಾಯದಲ್ಲಿ ಭಗವಂತನ ಜ್ಞಾನದ ಅರಿವಿನ ಮುಖ ಮತ್ತು ಕರ್ಮದ ಪ್ರಭೇದಗಳನ್ನು ಕೃಷ್ಣ ವಿವರಿಸುತ್ತಾನೆ. ಹಿಂದೆ ಹೇಳಿದ ಜ್ಞಾನಯೋಗ ಮತ್ತು ಕರ್ಮಯೋಗವನ್ನೇ ವಿಸ್ತರಿಸಿ ಜ್ಞಾನದ ಮಹತ್ವ ಮತ್ತು ಕರ್ಮದ ಪ್ರಭೇದಗಳ ಜೊತೆಗೆ ಈ ಎರಡು ಮಾರ್ಗದಿಂದ ನಾವು ಪಡೆಯತಕ್ಕಂತಹ ಭಗವಂತನ ಮಹಿಮೆ- ಇದನ್ನು ಈ ಅಧ್ಯಾಯದಲ್ಲಿ ಕಾಣಬಹುದು. ಈ ಅಧ್ಯಾಯ ಕೃಷ್ಣನ ಮಾತಿನೊಂದಿಗೆ ಆರಂಭವಾಗುತ್ತದೆ.

[…] ಭಗವದ್ಗೀತೆ (ಕರ್ಮ ಯೋಗ) ಅಧ್ಯಾಯ – 4 ಶ್ಲೋಕ – 01 […]