ಸಮಾಜ ಕಲ್ಯಾಣಕ್ಕೆ ಭಾರೀ ಅನುದಾನ: ಸಿದ್ದರಾಮಯ್ಯ ಬಜೆಟ್‌ನಲ್ಲಿ ವಿದ್ಯಾರ್ಥಿನಿಲಯಗಳು, ಗಂಗಾ ಕಲ್ಯಾಣಕ್ಕೆ ಉತ್ತೇಜನ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ದಾಖಲೆ 17ನೇ ಬಜೆಟ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚಿನ ಅನುದಾನ ಘೋಷಣೆ ಮಾಡಲಾಗಿದೆ. ಹೊಸ ವಿದ್ಯಾರ್ಥಿನಿಲಯಗಳು, ವಸತಿ ಶಾಲೆಗಳ ಸ್ಥಾಪನೆ, ಗಂಗಾ ಕಲ್ಯಾಣ ಯೋಜನೆಯ ಅನುದಾನ ಹೆಚ್ಚಳ ಸೇರಿದಂತೆ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ.