ಕೆ.ಆರ್.ಪೇಟೆ,ಅ.08: ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಕವಾಗಿ ಕೆಲಸ ಮಾಡುತ್ತಿದ್ದೇನೆ. ರಾಜ್ಯ ಸರ್ಕಾರವು ಶಾಸಕರಿಗೆ ಸರಿಯಾಗಿ ಅನುಧಾನ ನೀಡುತ್ತಿಲ್ಲ. ಆದರೂ ಬರುವ ಅಷ್ಟೋ, ಇಷ್ಟೋ ಅನುಧಾನದಲ್ಲಿ ತಾಲ್ಲೂಕಿನಲ್ಲಿ ಅಗತ್ಯವಿರುವ ಗ್ರಾಮಗಳಿಗೆ ಅನುಧಾನ ಹಂಚಿಕೆ ಮಾಡುವ ಮೂಲಕ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ತಾಲ್ಲೂಕಿನ ಜನತೆ ಮೊನ್ನೆ ನಡೆದ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ನನಗೆ ಕೆಲಸ ಮಾಡಲು ಶಕ್ತಿ ತುಂಬಿದ್ದೀರಿ. ಈ ಫಲಿತಾಂಶವು ಮುಂಬರುವ ತಾಲ್ಲೂಕು, ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಶಾಸಕ ಹೆಚ್.ಟಿ.ಮಂಜು ಹೇಳಿದರು.
ಅವರು ತಾಲ್ಲೂಕಿನ ಹಿರೀಕಳಲೆ, ಗಾಂಧೀನಗರ, ಕೃಷ್ಣಾಪುರ ಗ್ರಾಮಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ 10ಲಕ್ಷ ರೂನಂತೆ ಒಟ್ಟು 30ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಬಾಕ್ಸ್ ಡ್ರೆöÊನೇಜ್ ಮತ್ತು ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಇದನ್ನು ಓದಿ: ಕೆ.ಆರ್.ಪೇಟೆ- ರಾಮಾಯಣ- ಮಹಾಭಾರತ ಕಾವ್ಯಗಳ ಸಾರವನ್ನು ಅರಿತು ನಡೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ- ಶಾಸಕ ಹೆಚ್.ಟಿ..ಮಂಜು
ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷವು ಗಟ್ಟಿಯಾಗಿದೆ ಎಂಬುದು ಇತ್ತೀಚೆಗೆ ನಡೆದ ಟಿಎಪಿಸಿಎಂಎಸ್ ಚುನಾವಣೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಚುನಾವಣೆಯಲ್ಲಿ ಸಾಬೀತಾಗಿದೆ. ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಕಳೆದ ಎರಡೂವರೆ ವರ್ಷಗಳಿಂದ ಒಂದೇ ಒಂದು ಆಶ್ರಯ ಮನೆಯನ್ನು ಮಂಜೂರು ಮಾಡಿಲ್ಲ. ರಾಜ್ಯದ ಎಲ್ಲಾ ಅನುಧಾನವು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದ್ದಾರೆ. ಮೂಲಭೂತ ಸೌಲಭ್ಯಗಳಿಗೆ ಅನುಧಾನ ನೀಡುವಲ್ಲಿ ರಾಜ್ಯ ಸರ್ಕಾರವು ಹಿಂದೇಟು ಹಾಕುತ್ತಿದೆ. ಆದರೂ ಅಧಿಕಾರಿಗಳ ಬೆನ್ನತ್ತಿ ಸಚಿವರ ಬೆನ್ನತ್ತಿ ಅನುಧಾನ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಕಾಂಗ್ರೆಸ್ ಪಕ್ಷದ ಶಾಸಕರಿಗೂ ಅನುಧಾನ ನೀಡುತ್ತಿಲ್ಲ. ಇನ್ನು ವಿರೋಧ ಪಕ್ಷದ ಶಾಸಕರ ಸ್ಥಿತಿ ಶೋಚನೀಯವಾಗಿದೆ.

ಸಂವಿಧಾನ ಬದ್ದವಾದ ಶಾಸಕರ ನಿಧಿ ನೀಡಿದರೂ ಸಾಕು ಸಮಾಧಾನಕರವಾಗಿ ಅಭಿವೃದ್ಧಿಗೆ ಸಾಧಿಸಬಹುದು. 2028ಕ್ಕೆ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷವು ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರಷ್ಟೇ ಸತ್ಯವಾಗಿದೆ. ಹಾಗಾಗಿ ನಮ್ಮ ಪಕ್ಷದ ಕಾರ್ಯಕರ್ತರು ವಿಚಲಿತರಾಗುವುದು ಬೇಡ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ, ತಾಲ್ಲೂಕು ಪಂಚಾಯಿತಿಯಲ್ಲಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರ ತರುವ ಮೂಲಕ ಹೆಚ್ಚಿನ ಅಭಿವೃದ್ಧಿ ಸಾಧಿಸಲು ವಿಫುಲ ಅವಕಾಶಗಳಿವೆ. ಹಾಗಾಗಿ ನಮ್ಮ ಮುಂದಿನ ಗುರಿ ಗ್ರಾ.ಪಂ.ತಾ.ಪಂ.ಜಿ.ಪಂ.ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮೆಲ್ಲರ ಏಕೈಕ ಗುರಿಯಾಗಿದೆ. ಹಾಗಾಗಿ ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ಶ್ರಮಿಸೋಣ ಎಂದು ಶಾಸಕರು ಕಾರ್ಯಕರ್ತರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಟಿಎಪಿಎಂಎಸ್ ನಿರ್ದೇಶಕ ಕಾಯಿ ಮಂಜುನಾಥ್, ಬೊಮ್ಮೇನಹಳ್ಳಿ ಮಂಜುನಾಥನಾಯಕ್, ಹಿರೀಕಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಮ್ಮರಾಮಕೃಷ್ಣೇಗೌಡ, ಪಿಡಿಓ ನವೀನ್.ಎಂ.ಆರ್, ಕಾರ್ಯದರ್ಶಿ ರವಿ, ಸದಸ್ಯರಾದ ಪುಷ್ಪಲತಾ, ಗಣೇಶ್, ಕೆಂಪರಾಜು, ಸಣ್ಣನಿಂಗಯ್ಯ, ಗುರುರಾಜ್, ತಮ್ಮಯ್ಯ, ರೋಷನ್, ಮಹೇಶ್, ಗಣೇಶಾಚಾರ್, ಚೌಡೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮೀ ಶಂಭುಲಿಂಗೇಗೌಡ, ವಿಜಯ್ಕುಮಾರ್, ಗ್ರಾ.ಪಂ.ಸದಸ್ಯರಾದ ಗಿರೀಶ್, ಅಂಬುಜಮ್ಮ ಗಿರೀಗೌಡ, ಜಯಲಕ್ಷö್ಮಮ್ಮ, ದೇವರಾಜು, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.

[…] ಇದನ್ನು ಓದು: ಮುಂಬರುವ ತಾ. ಪಂ.ಜಿ.ಪಂ.ಚುನಾವಣೆಯಲ್ಲಿ ಜೆಡಿ… […]