ತಿರುವನಂತಪುರಂ, ಅ.17: ಕೇರಳ ಸರ್ಕಾರವು ದೇಶದ ಮೊದಲ ಸಂಪೂರ್ಣ ಹವಾನಿಯಂತ್ರಿತ (AC) ಪ್ರಾಥಮಿಕ ಶಾಲೆಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಅಕ್ಟೋಬರ್ 19ರಂದು ಈ ಮಾದರಿ ಶಾಲೆಯ ಉದ್ಘಾಟನೆ ನಡೆಯಲಿದೆ.
ರಾಜ್ಯದ ಶಿಕ್ಷಣ ಇಲಾಖೆಯು ಮಕ್ಕಳಿಗೆ ಆರಾಮದಾಯಕ ಮತ್ತು ಆಧುನಿಕ ಕಲಿಕಾ ವಾತಾವರಣ ಒದಗಿಸಲು ಈ ಯೋಜನೆಯನ್ನು ರೂಪಿಸಿದ್ದು, ಶಾಲೆಯ ಎಲ್ಲಾ ತರಗತಿ ಕೊಠಡಿಗಳು, ಗ್ರಂಥಾಲಯ ಮತ್ತು ಪ್ರಯೋಗಾಲಯಗಳು ಏರ್ಕಂಡೀಷನ್ ವ್ಯವಸ್ಥೆಯೊಂದಿಗೆ ಸಜ್ಜುಗೊಳಿಸಲಾಗಿದೆ.
ಈ ಯೋಜನೆ ಶಿಕ್ಷಣ ಕ್ಷೇತ್ರದಲ್ಲಿ ಕೇರಳದ ಹೊಸ ಪ್ರಯೋಗವಾಗಿ ಗಮನ ಸೆಳೆದಿದೆ. ಹವಾಮಾನ ಬದಲಾವಣೆಯ ನಡುವೆಯೂ ವಿದ್ಯಾರ್ಥಿಗಳಿಗೆ ಸುಸಜ್ಜಿತ ಶಿಕ್ಷಣ ಅನುಭವ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
