ಚಿಕ್ಕಮಗಳೂರು : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನ ಒಂದನ್ನು ವಶಪಡಿಸಿಕೊಂಡ ಘಟನೆ ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ.
ಶೃಂಗೇರಿ ಯ ಕಿರಕೋಡು ಸಮೀಪ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಶೃಂಗೇರಿ PSI ನೇತೃತ್ವದಲ್ಲಿ ದಾಳಿ ನಡೆಸಿ ಪಿಕ್ ಅಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ರಮ ಮರಳು ಸಾಗಾಟ ಮಾಡುವ ವಾಹನಗಳ ಮುಂಭಾಗ ಮಾತ್ರ ನಂಬರ್ ಪ್ಲೇಟ್ ಹೊಂದಿದ್ದು, ಹಿಂಭಾಗ ನಂಬರ್ ಪ್ಲೇಟ್ ಇಲ್ಲದೆ ಮರಳು ಸಾಗಾಟದ ದಂಧೆ ನಡೆಸುತ್ತಿದ್ದ, KA18 D 1900 ನೋಂದಣಿ ಸಂಖ್ಯೆಯ ವಾಹನವನ್ನು ವಶಪಡಿಸಿಕೊಂಡು, ಪ್ರಕರಣವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.
