ಬೆಂಗಳೂರು ಭವಿಷ್ಯದ ಬೃಹತ್ ಯೋಜನೆಗಳ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಹಾಗೂ ನಿತಿನ್ ಗಡ್ಕರಿ ನಡುವೇ ಮಹತ್ವದ ಮಾತುಕತೆ

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರು ನಗರಾಭಿವೃದ್ಧಿಗಾಗಿ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ, ಶಿರಾಡಿ ಘಾಟ್ ಕಾಮಗಾರಿ ವೇಗವರ್ಧನೆ ಸೇರಿದಂತೆ ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು. ಗಡ್ಕರಿ ಅವರು ಯೋಜನೆಗಳಿಗೆ ಸಕಾರಾತ್ಮಕ ಸ್ಪಂದನೆ ನೀಡಿದ್ದು, ಕೆಲ ಯೋಜನೆಗಳ ಪೂರ್ಣತೆಗೆ ತ್ವರಿತ ಕ್ರಮಕ್ಕೆ ಭರವಸೆ ನೀಡಿದರೆಂದು ತಿಳಿದುಬಂದಿದೆ