ತುಮಕೂರು, ಆ.15: ತುಮಕೂರು ಜಿಲ್ಲಾ ವಕೀಲರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಹೆಚ್. ಕೆಂಪರಾಜಯ್ಯ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಹೇಶ್, ಟಿ.ಎಂ. ಧನಂಜಯ, ಖಜಾಂಚಿ ಸಿಂಧು, ಕಾರ್ಯಕಾರಿ ಸಮಿತಿ ಸದಸ್ಯರಾದ ಗೋವಿಂದರಾಜು ಪಿ., ಡಿ.ಎ. ಜಗದೀಶ್, ಶ್ರೀನಿವಾಸಮೂರ್ತಿ, ಸುರೇಶ್ ಎಸ್., ಪದ್ಮಶ್ರೀ ಸಿ.ಆರ್., ಸೇವಾಪ್ರಿಯ ಜೆ.ಎಸ್. ಸೇರಿದಂತೆ ನ್ಯಾಯಾಧೀಶರು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು.
– ಚಂದ್ರಚೂಡ ಕೆ.ಬಿ.
