ಭಾರತದಲ್ಲಿ ಶಿಶು ಮರಣ ಪ್ರಮಾಣ ದಾಖಲೆ ಮಟ್ಟದಲ್ಲಿ ಕುಸಿತ

ಭಾರತದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಕುಸಿತ ಕಂಡಿದ್ದು, 1971ರ ಸ್ಥಿತಿಗೆ ಹೋಲಿಸಿದರೆ ಶೇ.80ರಷ್ಟು ಸುಧಾರಣೆ ಸಾಧಿಸಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶಗಳಲ್ಲಿ ಅತ್ಯಧಿಕ ಪ್ರಮಾಣ ದಾಖಲಾಗಿದೆ.