ಹಾಸನ, ಜು. 4: ಅಂತರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನದ ಅಂಗವಾಗಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಹಾಸನ ನಗರದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಬಟ್ಟೆ ಬ್ಯಾಗ್ಗಳನ್ನು ವಿತರಿಸುವ ಮೂಲಕ “ಪ್ಲಾಸ್ಟಿಕ್ ಚೀಲಗಳನ್ನು ನಿಷೇಧಿಸಿ, ಬಟ್ಟೆ ಬ್ಯಾಗ್ಗಳನ್ನು ಬಳಸಿ” ಎಂಬ ಸಂದೇಶದೊಂದಿಗೆ ಪರಿಸರ ಸಂರಕ್ಷಣೆಯ ಕುರಿತು ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷ ರೋ. ಕೆ.ಎಸ್. ಯೋಗೇಶ್, ಕಾರ್ಯದರ್ಶಿ ರೋ. ಬಿ.ಎಂ. ದರ್ಶನ್, ಉಪಾಧ್ಯಕ್ಷ ರೋ. ಯು.ಎಂ. ಭೂದೇಶ್, ಖಜಾಂಚಿ ರೋ. ಎಂ.ಡಿ. ಶಶಿಂದ್ರನಾಥನ್, ಜಂಟಿ ಕಾರ್ಯದರ್ಶಿ ರೋ. ರಾಜೇಶ್ ಸೇರಿದಂತೆ ಕ್ಲಬ್ನ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
