ರಾಮನಾಥಪುರ, ಮಾ.31:ಹಾಸನ ಜಿಲ್ಲೆಯ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದ ಗ್ರಾಮದೇವತೆ ದೇವಸ್ಥಾನದ ಕಳಶಾರೋಹಣ ಕಾರ್ಯಕ್ರಮ ಹಾಗೂ ಧಾರ್ಮಿಕ ಸಮಾರಂಭವು ಜೂನ್ 18ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಿದ್ದಗಂಗಾ ಮಠದ ಪರಮಪೂಜ್ಯ ತ್ರಿವಿಧ ದಾಸೋಹಿ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರನ್ನು ಮಂಗಳವಾರ ಸಿದ್ದಗಂಗಾ ಮಠದಲ್ಲಿ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಗ್ರಾಮಸ್ಥರು ಶ್ರೀಗಳಿಗೆ ಆಹ್ವಾನ ಪತ್ರಿಕೆ ನೀಡಿ ಸಮಾರಂಭಕ್ಕೆ ಆಗಮಿಸುವಂತೆ ವಿನಂತಿಸಿದರು. ಹಾಸನ ಜಿಲ್ಲೆಯ ಬ್ಯಾಡರಹಳ್ಳಿ ಗ್ರಾಮಸ್ಥರ ಮನವಿಗೆ ಸಿದ್ದಗಂಗಾ ಪರಮಪೂಜ್ಯರು ಸಮ್ಮತಿ ಸೂಚಿಸಿದ್ದು, ಗ್ರಾಮಸ್ಥರಲ್ಲಿ ಸಂತಸ ಮನೆ ಮಾಡಿತು.
ಈ ಸಂದರ್ಭದಲ್ಲಿ ಹಾಸನ ತಣ್ಣೀರುಹಳ್ಳ ಮಠದ ಪೂಜ್ಯ ಶ್ರೀ ವಿಜಯಕುಮಾರ ಮಹಾಸ್ವಾಮೀಜಿ, ಹಾಸನ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಧು, ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
