
ಬೆಂಗಳೂರು: ಬೆಂಗಳೂರು, ಮೈಸೂರು, ಮಂಡ್ಯ, ಆರ್.ಟಿ.ನಗರ, ಇಳವಾಲ, ರಾಮಕೃಷ್ಣ ಸೇರಿದಂತೆ 30 ಕಡೆ ಇಂದು(ಬುಧವಾರ) ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಬಿಲ್ಡರ್ಗಳ ಮನೆ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.
ಮನೆ, ಕಚೇರಿ, ಕಲ್ಯಾಣ ಮಂಟಪ ಸೇರಿ ಎಲ್ಲಾ ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಐಟಿ ಅಧಿಕಾರಿಗಳು ಸುಮಾರು 90 ವಾಹನಗಳಲ್ಲಿ ಹೋಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮನೆ, ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ. ದೆಹಲಿ, ಚೆನೈ, ಗೋವಾ,ಕೋಲ್ಕತ್ತಾದಿಂದ ಅಧಿಕಾರಿಗಳು ಬಂದಿದ್ದಾರೆ. ಬೆಳಗ್ಗೆ 5 ಗಂಟೆಗೆ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದು ಭ್ರಷ್ಟರಿಗೆ ಐಟಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ದೊಡ್ಡ ಪ್ರಮಾಣದಲ್ಲಿ ಐಟಿ ದಾಳಿ ನಡೆದಿದ್ದು ಮನೆ ಕಚೇರಿಗಳ ಶೋಧ ಕಾರ್ಯ ನಡೆಸಿದ್ದಾರೆ. ಮದುವೆ ಸಮಾರಂಭಕ್ಕೆ ಹೋಗುವ ರೀತಿ ಕಾರ್ ಗಳನ್ನು ಸಿಂಗರಿಸಿಕೊಂಡು ಬಂದು ದಾಳಿ ನಡೆಸಲಾಗಿದೆ. ಮಾಹಿತಿ ಸೋರಿಕೆಯಾದ ಹಿನ್ನಲೆಯಲ್ಲಿ ಮದುವೆಗೆ ಹೋಗುವ ಕಾರ್ ರೀತಿ ಸಿಂಗರಿಸಿ ದಾಳಿ ನಡೆಸಲಾಗಿದೆ.