ಕೆ.ಆರ್.ಪೇಟೆ:* ತಾಲೂಕಿಗೆ ಇದುವರೆವಿಗೂ ಐದು ಗ್ಯಾರಂಟಿ ಯೋಜನೆಗಳಿಂದ ಸುಮಾರು 750 ಕೋಟಿ ರೂಪಾಯಿಗಳನ್ನು ಕೆ.ಆರ್.ಪೇಟೆ ತಾಲೂಕಿನ ಜನತೆಗೆ ಖರ್ಚು ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳು ಮತಗಳಾಗಿ ಪರಿವರ್ತಿಸುವ ಕೆಲಸವಾಗಬೇಕು. ಈ ಮೂಲಕ ಪಕ್ಷವನ್ನು 2028ಕ್ಕೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಹಾಗೂ ಮುಖಂಡರು ಈಗಿನಿಂದಲೇ ಮನೆ ಮನೆ ಪ್ರಚಾರ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ *ದಿನೇಶ್ ಗೂಳೀಗೌಡ* ಹೇಳಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

“ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಯೋಜನೆಗಳು ಬಡವರ ಪಾಲಿಗೆ ವರದಾನವಾಗಿವೆ. ಪ್ರತಿ ಮನೆಗೂ ನೇರವಾಗಿ ಸರ್ಕಾರದ ಸೌಲಭ್ಯ ತಲುಪಿದೆ. ಕೆ.ಆರ್.ಪೇಟೆ ತಾಲೂಕಿನಲ್ಲಿಯೇ 750 ಕೋಟಿ ರೂ.ಗೂ ಹೆಚ್ಚು ಹಣ ಜನರ ಕೈ ಸೇರಿದೆ. ಇದನ್ನು ಜನರಿಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿ ನಮ್ಮ ಕಾರ್ಯಕರ್ತರ ಮೇಲಿದೆ” ಎಂದು ತಿಳಿಸಿದರು. ಮಂಡ್ಯ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮತ್ತೊಮ್ಮೆ ವಿಜಯದ ನಗೆ ಬೀರಲಿದೆ ಎಂದು ಭವಿಷ್ಯ ನುಡಿದರು.
*15 ವರ್ಷದ ಕೊರಗು ದೂರವಾಗಬೇಕು:*
“ಕಳೆದ 15 ವರ್ಷಗಳಿಂದ ಕಾಂಗ್ರೆಸ್ ಶಾಸಕರು ನಮ್ಮ ಕೆ.ಆರ್.ಪೇಟೆಯಲ್ಲಿ ಇಲ್ಲ ಎಂಬ ಕೊರಗು ತಾಲೂಕಿನ ಕಾರ್ಯಕರ್ತರಲ್ಲಿದೆ. ಇದನ್ನು ದೂರ ಮಾಡಲು ಈ ಬಾರಿ ಎರಡು ಅಥವಾ ಮೂರು ಬಾರಿ ಸೋತಿರುವ ಕ್ಷೇತ್ರಗಳಿಗೆ ಕನಿಷ್ಠ 6 ತಿಂಗಳು ಮುಂಚಿತವಾಗಿ ಅಭ್ಯರ್ಥಿಯನ್ನು ಘೋಷಣೆ ಮಾಡಿ, ಸಂಘಟನೆಗೆ ಒತ್ತು ನೀಡಿ ಗೆದ್ದೇ ಗೆಲ್ಲುವಂತೆ ಮಾಡಲು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಂಡಿದ್ದಾರೆ” ಎಂದು ಹೇಳಿದರು.

*2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ:*
“ನಮ್ಮ ಗ್ಯಾರಂಟಿ ಯೋಜನೆಗಳು ಬಡವರ ಪಾಲಿಗೆ ವರದಾನವಾಗಿರುವ ಕಾರಣ ಮತ್ತೆ ಕಾಂಗ್ರೆಸ್ ಪಕ್ಷವು 2028ರಲ್ಲಿಯೂ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ. ಅಭ್ಯರ್ಥಿ ಯಾರೇ ಆಗಲಿ ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಈ ಬಾರಿ ತಾಲ್ಲೂಕಿನಲ್ಲಿ ಒಗ್ಗಟ್ಟು ಸಾಧಿಸಲು ಮುಖಂಡರ ಮೇಲೆ ಹದ್ದಿನ ಕಣ್ಣಿಡಲು ಪಕ್ಷವು ತೀರ್ಮಾನ ಕೈಗೊಂಡಿದೆ ಹಾಗಾಗಿ ಪಕ್ಷದ ಮುಖಂಡರು ಪಕ್ಷಕ್ಕಾಗಿ ಸದಾ ಎಚ್ಚರಿಕೆಯಿಂದ ಶ್ರಮಿಸಬೇಕು.ಪಕ್ಷವು ಗುರುತಿಸುವ ಅಭ್ಯರ್ಥಿಯೇ ಡಿ.ಕೆ.ಶಿವಕಿಮಾರ್, ಸಿದ್ದರಾಮಯ್ಯ ಎಂದು ತಿಳಿದು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಪಣ ತೊಡಬೇಕು ಎಂದು ತಿಳಿಸಿಸರು.
ಸಭೆಯಲ್ಲಿ ಪಕ್ಷ ಸಂಘಟನೆ, ಮನೆ ಮನೆ ಪ್ರಚಾರ, ಬೂತ್ ಮಟ್ಟದ ಸಮಿತಿ ರಚನೆ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು ಹಾಗೂ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಬಿ.ಎಲ್.ದೇವರಾಜು, ಕೆಯುಐಡಿಎಫ್ ಸಿ ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಅಂಬರೀಶ್, ಮನ್ ಮುಲ್ ನಿರ್ದೇಶಕ ಎಂ.ಬಿ.ಹರೀಶ್, ಜಿ.ಪಂ.ಮಾಜಿ ಸದಸ್ಯರಾದ ಕೊಡಗಹಳ್ಳಿ ಮಂಜೇಗೌಡ, ಕೋಡಿಮಾರನಹಳ್ಳಿ ದೇವರಾಜು, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ರಾಜಾನಾಯಕ್, ಕಬ್ಬಲಗೆರೆಪುರ ಪುಟ್ಟಸ್ವಾಮಿ ಗೌಡ, ಬಸ್ತಿ ರಂಗಪ್ಪ, ತಾಲೂಕು ಬ್ಲಾಕ್ ಕಾಂಗ್ರೆಸ್ ಪ.ಜಾ, ಪ.ಪಂ. ವಿಭಾಗದ ಅಧ್ಯಕ್ಷರಾದ ರಾಜಯ್ಯ, ಶಿವಣ್ಣ, ಪುರಸಭಾ ಸದಸ್ಯ ಡಿ.ಪ್ರೇಮಕುಮಾರ್, ಹೊಸಹೊಳಲು ಪುಟ್ಟರಾಜು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಟಿ.ಎನ್.ದಿವಾಕರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಮೀನಾಕ್ಷಿರಮೇಶ್, ವಕೀಲ ಚಟ್ಟಂಗೆರೆ ನಾಗೇಶ್, , ಕೆ.ಆರ್.ರವೀಂದ್ರಬಾಬು, ಸಣ್ಣನಿಂಗೇಗೌಡ, .ಕೆ.ಕೆ.ರಮೇಶ್, ಆಯಾಜ್, ನವೀದ್ ಅಹಮದ್, ಹಾಫೀಜುಲ್ಲಾ ಷರೀಫ್,(ಸಲ್ಲು), ಸಯ್ಯದ್ ಜಮೀಲ್, ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯರಾದ ಶಿವಮ್ಮ, ಶಿವಣ್ಣ, ಲತಾ, ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಸಭೆಯ ನಂತರ ಸಮಾಜ ಸೇವಕ ಆರ್.ಟಿ.ಓ.ಮಲ್ಲಿಕಾರ್ಜುನ್ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗಿತ್ತು.
ಆರ್.ಟಿ.ಓ.ಮಲ್ಲಿಕಾರ್ಜುನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ ಹಾಗೂ ಸ್ಟಾರ್ ಚಂದ್ರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
