ಉಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಹೊನ್ನೇನಹಳ್ಳಿ ಗ್ರಾಮದ ರೈತ ಪುಟ್ಟೇಗೌಡ ಮತ್ತು ನಾಗಮ್ಮ ಅವರಿಗೆ ಸೇರಿದ ಜಮೀನಿನಲ್ಲಿ ಆಕಸ್ಮಿಕವಾಗಿ ಬೆಂಕಿಗೆ ಜಮೀನಿನಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ತೆಂಗಿನ ಮರ ಹಾಗೂ ಸಸಿಗಳು ಬೆಂಕಿಗೆ ಆಹುತಿಯ ಜೊತೆಗೆ ಕಟಾವಿಗೆ ಬಂದಿದ್ದ ಕಬ್ಬು ಕೂಡ ಸಂಪೂರ್ಣವಾಗಿ ಸುಟ್ಟು ಕಾರುಕಲಾಗಿದೆ. ಈ ಘಟನೆಯಿಂದ ಕಂಗಾಲಾದ ರೈತ ದಂಪತಿಗೆ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಅವರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಆರ್ಥಿಕ ಸಹಾಯದ ಜೊತೆಗೆ ಆತ್ಮಸ್ಟೈರ್ಯ ತುಂಬಿ ಮಾನವೀಯತೆ ಮೆರೆದಿದ್ದಾರೆ.

ಬಳಿಕ ಮಾತನಾಡಿದ ಮುಖಂಡ ಶೇಖರ್ ಅವರು ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸ್ಥಳಕ್ಕೆ ಭೇಟಿ ನೀಡಿ ಆತ್ಮಸ್ಥೈರ್ಯ ನೀಡುವುದರ ಜೊತೆಗೆ ತಕ್ಷಣ ಧನ ಸಹಾಯ ನೀಡಿದ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಅವರ ಧನ ಸಹಾಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇಂತಹ ಕಷ್ಟದ ಸಮಯದಲ್ಲಿ ರೈತರ ಜೊತೆ ನಿಂತು ಸಹಾಯ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿವಕುಮಾರ್, ಸುರೇಶ, ಶಿವಕುಮಾರ್ ಗಜ,ಮೋಹನ್,ಸೇರಿದಂತೆ ಉಪಸ್ಥಿತರಿದ್ದರು.
*ಸುದ್ದಿಯೊಂದಿಗೆ ಮನು ಮಕವಳ್ಳಿ ಕೆ ಆರ್ ಪೇಟೆ*
