ಕೆ.ಆರ್.ಪೇಟೆ,ಸೆ.23: ಮಂಡ್ಯ ಜಿಲ್ಲೆಯಲ್ಲಿ ಮಾದಿಗ ಸಮುದಾಯಕ್ಕೆ ನಿಗಮ, ಮಂಡಳಿ ಸೇರಿ ರಾಜಕೀಯ ಉನ್ನತ ಸ್ಥಾನಮಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಾದರ ಮಹಾಸಭಾದ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಿ.ಕಾವಲು ಕಾಂತರಾಜು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 45ರಿಂದ 50 ಲಕ್ಷ ಜನಸಂಖ್ಯೆ ಯನ್ನು ಹೊಂದಿರುವ ಮಾದಿಗ ಸಮುದಾಯವನ್ನು ರಾಜಕೀಯವಾಗಿ ಸಂಪೂರ್ಣ ಕಡೆಗಣಿಸಲಾಗಿದೆ ಹೊಂದಿರುವ ಎಂದು ಆರೋಪಿಸಿದರು.
ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮಾದಿಗ ಸಮುದಾಯ ಹೆಚ್ಚಿನ ಮಟ್ಟದಲ್ಲಿ ಬೆಂಬಲಿಸಿ ಬಹುಮತದ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣವಾಗಿದೆ. ಆದರೆ, ದಲಿತರಲ್ಲೇ ಬಲಗೈ ಸಮುದಾಯಗಳಿಗೆ ರಾಜಕೀಯ ಸ್ಥಾನಮಾನ ಸೇರಿದಂತೆ ಎಲ್ಲಾ ಅವಕಾಶಗಳನ್ನು ಸರ್ಕಾರ ನೀಡಿದೆ. ಅತಿ ಹೆಚ್ಚು ಶೋಷಣೆಗೆ ಒಳಗಾಗಿರುವ ನಮ್ಮ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲೆಯಲ್ಲಿ ನಮ್ಮ ಸಹೋದರ ಬಲಗೈ ಸಮುದಾಯಕ್ಕೆ ಸರ್ಕಾರದಿಂದ ಹೆಚ್ಚು ರಾಜಕೀಯ ಸ್ಥಾನಮಾನ ನೀಡಿದ್ದು, ನಮ್ಮ ಮಾದಿಗ ಸಮುದಾಯಕ್ಕೆ ಒಂದೇ ಒಂದು ರಾಜಕೀಯ ಸ್ಥಾನಮಾನ ನೀಡಿಲ್ಲ. ಹೀಗಾಗಿ ನಮ್ಮ ಮಾದಿಗ ಸಮುದಾಯದ ನಾಯಕ, ಸಂಘಟನಾ ಚತುರ, ವಕೀಲರಾದ ನಾಗಮಂಗಲ ಎನ್.ಆರ್.ಚಂದ್ರಶೇಖರ್ ಅವರು ಕಳೆದ 25ವರ್ಷಗಳಿಂದಲೂ ವರ್ಷಗಳಿಂದಲೂ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ದುಡಿಯುತ್ತಿದ್ದಾರೆ. ಅವರಿಗೆ ಯಾವುದಾದರೂ ಒಂದು ನಿಗಮ, ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.
ಜೊತೆಗೆ ಪರಿಶಿಷ್ಟ ಜಾತಿಯ ಒಳಮೀಸಲಾತಿಯಲ್ಲಿ ಖಾಸಗಿ ಕ್ಷೇತ್ರಕ್ಕೆ ಕಾಮಗಾರಿ ಟೆಂಡರ್ನಲ್ಲಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಮೀಸಲಾತಿಯಲ್ಲೂ ಒಳ ಮೀಸಲಾತಿ ಜಾರಿ ಮಾಡುವ ಮೂಲಕ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ದೊರಕಿಸಬೇಕು ಎಂದು ಕಾಂತರಾಜು ಆಗ್ರಹಿಸಿದರು.
ನಾಡಿನ ಜನಪ್ರಿಯ
ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ನೂತನ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯ ಮಾದಿಗ ಸಮುದಾಯಕ್ಕೆ ಸೂಕ್ತ ಸ್ಥಾನ ಮಾನ ನೀಡುವ ಮೂಲಕ ನಮ್ಮ ಮಾದಿಗ ಸಮುದಾಯದ ಬೆಳವಣಿಗೆಗೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಮಂಡ್ಯ ಜಿಲ್ಲೆ ಕಾಂಗ್ರೆಸ್ ಬೆಳವಣಿಗೆಗೆ ತೊಡಕು ಉಂಟಾಗಲಿದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಡ್ಯ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಆರ್.ಕೆ.ಕುಮಾರ್, ತಾಲೂಕು ಮಾದಾರ ಮಹಾಸಭಾ ಅಧ್ಯಕ್ಷ ಆರ್.ಟಿ.ಉಮೇಶ್, ಕಾರ್ಯದರ್ಶಿ ಧನಂಜಯ, ಪುರಸಭಾ ಸದಸ್ಯ ಹಾಗೂ ಡಾ.ಬಾಬು ಜಗಜೀವನರಾಂ ಸಂಘಟನೆಗಳ ಅಧ್ಯಕ್ಷ ಹೊಸಹೊಳಲು ಎಚ್.ಎಂ. ಪುಟ್ಟರಾಜು, ನಿವೃತ್ತ ಶಿಕ್ಷಕರಾದ ಶಿವಣ್ಣ, ಉದ್ಯಮಿ ನಂಜುಂಡಸ್ವಾಮಿ, ಗಾಯಕ ರವಿ ಶಿವಕುಮಾರ್, ಸೇರಿದಂತೆ ಹಲವು ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
– ಶ್ರೀನಿವಾಸ್ ಆರ್.
