ಕೆ.ಆರ್.ಪೇಟೆ: ತಾಲ್ಲೂಕಿನ ಜೆಡಿಎಸ್ ಪಕ್ಷದ ಹೋಬಳಿ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇನಹಳ್ಳಿ ಎಂ. ಮೋಹನ್ ತಿಳಿಸಿದರು.
ಪಟ್ಟಣದ ಬಸವೇಶ್ವರನಗರದಲ್ಲಿರುವ ಶಾಸಕ ಹೆಚ್.ಟಿ. ಮಂಜು ಅವರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನೂತನ ಅಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.
ಹೋಬಳಿವಾರು ನೂತನ ಅಧ್ಯಕ್ಷರ ವಿವರ:
* ಕಸಬಾ: ಎನ್. ಕೃಷ್ಣೇಗೌಡ (ಕುಪ್ಪಹಳ್ಳಿ)
* ಸಂತೇಬಾಚಹಳ್ಳಿ: ಮಾಳಗೂರು ನವೀನ್ ಕುಮಾರ್ ಗೌಡ
* ಶೀಳನೆರೆ: ಹೊನ್ನೇನಹಳ್ಳಿ ಹೆಚ್.ಆರ್. ನಾಗರಾಜೇಗೌಡ
* ಕಿಕ್ಕೇರಿ: ಎನ್. ಕೃಷ್ಣೇಗೌಡ
* ಬೂಕನಕೆರೆ: ವಿಠಲಾಪುರ ರಾಜಶೇಖರ್
* ಅಕ್ಕಿಹೆಬ್ಬಾಳು: ಚಿಕ್ಕಮಂದಗೆರೆ ಕೆ.ಎನ್. ರಮೇಶ್
ಶಾಸಕ ಹೆಚ್.ಟಿ. ಮಂಜು ಹಾಗೂ ಆಯಾ ಭಾಗದ ಪಕ್ಷದ ಮುಖಂಡರ ಸಲಹೆ ಮೇರೆಗೆ ನೇಮಕ ಮಾಡಲಾಗಿದೆ. ನೂತನ ಅಧ್ಯಕ್ಷರು ಪಕ್ಷ ಸಂಘಟನೆಗೆ ಆದ್ಯತೆ ನೀಡಿ, ಪಕ್ಷದ ಸಿದ್ಧಾಂತ ಮತ್ತು ಕಾರ್ಯಕ್ರಮಗಳನ್ನು ಗ್ರಾಮ ಹಾಗೂ ಮನೆಮನೆಗೆ ತಲುಪಿಸಬೇಕು. ರೈತರು, ಯುವಕರು, ಮಹಿಳೆಯರು ಮತ್ತು ಹಿರಿಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.

ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. 2028ರ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಹೆಚ್.ಟಿ. ಮಂಜು ಅವರನ್ನು ಮತ್ತೊಮ್ಮೆ ಗೆಲ್ಲಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಹಿಂದಿನ ಹೋಬಳಿ ಘಟಕದ ಅಧ್ಯಕ್ಷರ ಪರಿಶ್ರಮವನ್ನು ಸ್ಮರಿಸಿದ ಅವರು, ಪಕ್ಷಕ್ಕಾಗಿ ಸೇವೆ ಸಲ್ಲಿಸಿದವರಿಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸೂಕ್ತ ಜವಾಬ್ದಾರಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಜೆಡಿಎಸ್ ಕಾರ್ಯಾಧ್ಯಕ್ಷ ಮೆಣಸ ಮಹದೇವೇಗೌಡ, ರೈತ ಮೋರ್ಚಾ ಅಧ್ಯಕ್ಷ ಹುಲ್ಲೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಹೆಚ್.ಟಿ. ಲೋಕೇಶ್, ಮಾಜಿ ಅಧ್ಯಕ್ಷ ತೆರ್ನೇನಹಳ್ಳಿ ಬಲದೇವ್, ನಾಗರಘಟ್ಟ ದಿಲೀಪ್ ಕುಮಾರ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬಲ್ಲೇನಹಳ್ಳಿ ಬಿ.ಎಂ. ರಾಮಚಂದ್ರನ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
-ಶ್ರೀನಿವಾಸ್ ಆರ್.
