ಕೆ.ಆರ್.ಪೇಟೆ:ದೇಶದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರ ಧರ್ಮಪತ್ನಿ, ಸರಳತೆಯ ಪ್ರತೀಕ, ಆದರ್ಶಮಾತೆ ಚೆನ್ನಮ್ಮನವರು ನಿಧನರಾದ ಹಿನ್ನೆಲೆಯಲ್ಲಿ ಕೆ ಆರ್ ಪೇಟೆ ತಾಲ್ಲೂಕಿನ ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ರವರು ಇಂದು ಹೊಳೆನರಸೀಪುರ ಶಾಸಕರು ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ನಿವಾಸಕ್ಕೆ ಬೆಂಗಳೂರಿನಿಂದ ಹೊಳೆನರಸೀಪುರಕ್ಕೆ ತೆರಳುವ ಮಾರ್ಗಮಧ್ಯೆ ಬೆಳ್ಳೂರ್ ಕ್ರಾಸ್ ಬಳಿ ಪೂಜ್ಯನೀಯೆ ಚೆನ್ನಮ್ಮನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮಲ್ಲಿಕಾರ್ಜುನ್ ಅವರು ಪುಷ್ಪ ನಮನ ಸಲ್ಲಿಸಿ ಕರ್ನಾಟಕದ ಹೆಮ್ಮೆಯ ತ್ಯಾಗಮೂರ್ತಿ ಪ್ರತಿಕ ಚೆನ್ನಮ್ಮನವರು ದೇವೇಗೌಡರ ರಾಜಕೀಯ ಮತ್ತು ಸಾಮಾಜಿಕ ಜೀವನಕ್ಕೆ ಬೆನ್ನೆಲುಬಾಗಿ ನಿಂತಿದ್ದರು. ತ್ಯಾಗ, ಸೇವಾ ಮನೋಭಾವ ಅವರ ಜೀವನದ ಆದರ್ಶವಾಗಿತ್ತು.

ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್ ರವರು ದುಃಖ ಅಭಿಪ್ರಾಯವ್ಯಕ್ತಪಡಿಸಿ ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವೇಗೌಡರ ಕುಟುಂಬದವರಿಗೆ, ಬಂಧು-ಮಿತ್ರರಿಗೆ ಮತ್ತು ಲಕ್ಷಾಂತರ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮಲ್ಲೇನಹಳ್ಳಿ ಮೋಹನ್, ತಾ. ಪಂ ಮಾಜಿ ಸದಸ್ಯ ಅಗ್ರಹಾರಬಾಚಹಳ್ಳಿ ಮಹದೇವ್, ಪ್ರಥಮ ದರ್ಜೆಗುತ್ತಿಗೆದಾರ ಮೆಣಸ ಮಧು,ವಿವಿಧ ಪಕ್ಷದ ಮುಖಂಡರು,ಕಾರ್ಯಕರ್ತರು ಮತ್ತು ಅಪಾರ ಸಂಖ್ಯೆಯ ಜನರು ಉಪಸ್ಥಿತರಿದ್ದರು.
*ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ*
