ಕೆ.ಆರ್. ಪೇಟೆ: ಇದೇ ಡಿ.29ರಂದು (ಸೋಮವಾರ) ಬೆಳಿಗ್ಗೆ 11 ಗಂಟೆಗೆ ಕೆ.ಆರ್. ಪೇಟೆ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಉತ್ತಮಪಡಿಸುವ ಉದ್ದೇಶದಿಂದ ನೇರ ಫೋನ್ ಇನ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಹೆಚ್.ಟಿ. ಮಂಜು ಅವರು ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ತಾಲ್ಲೂಕಿನಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಓದುತ್ತಿರುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳು ಈ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.
2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಭಯವನ್ನು ಹೋಗಲಾಡಿಸಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಡಿ.29ರಂದು ಬೆಳಿಗ್ಗೆ 11 ಗಂಟೆಯಿಂದ ಶಾಸಕರಾದ ಹೆಚ್.ಟಿ. ಮಂಜು ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಆಗಮಿಸಿ, ವಿದ್ಯಾರ್ಥಿಗಳ ಕರೆಗಳನ್ನು ಸ್ವೀಕರಿಸಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.
ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸುವ ಜೊತೆಗೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದ ಅಗತ್ಯ ಮಾಹಿತಿಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ. ತಿಮ್ಮೇಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇರ ಫೋನ್ ಇನ್ ಕಾರ್ಯಕ್ರಮಕ್ಕೆ ಕರೆ ಮಾಡಬಹುದಾದ ಮೊಬೈಲ್ ಸಂಖ್ಯೆಗಳು:
-
94489 72191
-
97430 37637
-
99007 37773
-
97401 31387
ಎಲ್ಲಾ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಿಕ್ಷಣ ಇಲಾಖೆ ಮನವಿ ಮಾಡಿದೆ.
– ಶ್ರೀನಿವಾಸ್ ಆರ್.

[…] ಇದನ್ನು ಓದು: ಕೆ.ಆರ್. ಪೇಟೆ: ಎಸ್ಎಸ್ಎಲ್ಸಿ ಫಲಿತಾಂಶ ಸ… […]