ಕೆ. ಆರ್. ಪೇಟೆ : ಗ್ರಾಮೀಣ ಭಾಗದ ವಿದ್ಯಾವಂತ ನಿರುದ್ಯೋಗಿಗಳ ಜೀವನಮಟ್ಟ ಸುಧಾರಣೆಗೆ ಜಿಲ್ಲಾ ಮಟ್ಟದ ಉದ್ಯೋಗಮೇಳವನ್ನು ಹಮ್ಮಿಕೊಂಡಿದ್ದು ನಿಮ್ಮ ವಿದ್ಯಾರ್ಹತೆಗೆ ತಕ್ಕಂತೆ ನೋಂದಣಿ ಮಾಡಿಕೊಂಡು ಯುವ ವಿದ್ಯಾವಂತ ನಿರುದ್ಯೋಗಿಗಳು ಈ ಅವಕಾಶವನ್ನು ಬಳಸಿಕೊಳ್ಳಿ ಎಂದು ತಿಳಿಸಿದರು”
ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು, ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಂಡ್ಯ ವಿಶ್ವ ವಿದ್ಯಾಲಯ, ಮಂಡ್ಯ ಇವರುಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು 2026 ದಿನಾಂಕ:-21-02-2026ನೇ ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಕಲಾಭವನ, ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯದಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳ ನೋಂದಣಿ ಕಡ್ಡಾಯವಾಗಿದ್ದು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿಯೂ ನೋಂದಣಿ ಮಾಡಿಕೊಳ್ಳಲು ಅವಕಾಶವಿದ್ದು ಮಾಹಿತಿ ತಂತ್ರಜ್ಞಾನ , ಆರೋಗ್ಯಸೇವೆ, ಕೈಗಾರಿಕಾ ವಲಯ, ಸೇವಾವಲಯ, ಕೃಷಿ ಉದ್ಯಮ, ಇತರೆ ಕಂಪನಿಗಳಲ್ಲಿ ಉದ್ಯೋಗಕ್ಕೆ ಅವಕಾಶವಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಸಂಸ್ಥೆಗಳಿಗೆ ಅನುಗುಣವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿ ಪಾಸ್ ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್ ಮತ್ತು ಶೈಕ್ಷಣಿಕ ದಾಖಲಾತಿಗಳು, ಅನುಭವ ಪ್ರಮಾಣ ಪತ್ರಗಳ ನಕಲು ಪ್ರತಿಗಳನ್ನು ಹಾಗೂ ಮೂಲಪ್ರತಿಗಳನ್ನು ಕೊಂಡೊಯ್ಯಬೇಕೆಂದು ತಿಳಿಸಿದರು.
ಯಾವುದೇ ಕೀಳರಿಮೆ ಇಲ್ಲದೆ ಎಸ್.ಎಸ್.ಎಲ್.ಸಿ ಗಿಂತ ಕಡಿಮೆ ವಿದ್ಯಾರ್ಹತೆಯಿಂದ ಸ್ನಾತಕೋತ್ತರ ಪದವಿವರೆಗೂ ಎಲ್ಲರೂ ನೋಂದಣಿ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ ಇದನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಉದ್ಯೋಗಮೇಳದ ಪ್ರಚಾರದ ಅಂಗವಾಗಿ ಸರ್ಕಾರಿ ಕಚೇರಿಗಳು, ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳು, ಬ್ಯಾಂಕ್, ರೈತ ಸಂಪರ್ಕ ಕೇಂದ್ರ, ಕಾಲೇಜುಗಳ ಭೇಟಿ, ಹಾಲಿನ ಡೈರಿ, ಮಾರುಕಟ್ಟೆ, ಸಹಕಾರ ಸಂಘಗಳು, ಮನೆಮನೆ ಬೇಟಿ ನೀಡಿ ಮಾಹಿತಿ ನೀಡಲಾಗಿದೆ ಹಾಗೂ ಆಟೋ ಪ್ರಚಾರದ ಮೂಲಕ ಮಾಹಿತಿ ನೀಡಿ ಕರಪತ್ರ ಹಂಚಲಾಗುತ್ತಿದ್ದು ಯುವ ಜನತೆ ಈ ಉದ್ಯೋಗ ಮೇಳದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ತಿಳಿಸಿದರು.
ವರದಿ : ಶ್ರೀನಿವಾಸ್ ಆರ್
