ಕೆ.ಆರ್.ಪೇಟೆ,ಜೂ.11: ಕರ್ನಾಟಕ ರಾಜ್ಯ ರೈತಪರ ಹೋರಾಟಗಾರರ ಸಂಘ ತಾಲ್ಲೂಕು ಘಟಕದ ವತಿಯಿಂದ ಇದೇ ಜೂನ್ 17ರಂದು ಪಟ್ಟಣದ ಪುರಸಭಾ ಕಚೇರಿ ಬಳಿ ಇರುವ ಮೈದಾನದಲ್ಲಿ ತಾಲ್ಲೂಕು ಮಟ್ಟದ ಬೃಹತ್ ರೈತ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಚಿಕ್ಕಳಲೆ ಮಂಜುನಾಥ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.
ಜೂನ್.17ರಂದು ಬುಧವಾರ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಪಾಂಡವಪುರ ಕ್ಷೇತ್ರದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಆರ್.ಪೇಟೆ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ವಹಿಸುವರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀರಂಗಪಟ್ಟಣ ಚಂದ್ರವನ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಬೇಬಿಬೆಟ್ಟದ ಶ್ರೀ ಶಿವಬಸವ ಸ್ವಾಮೀಜಿ, ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಗವೀಮಠದ ಶ್ರೀ ಸ್ವತಂತ್ರ ಚನ್ನವೀರಸ್ವಾಮೀಜಿ ಅವರು ವಹಿಸಿಕೊಳ್ಳುವರು. ಕರ್ನಾಟಕ ರಾಜ್ಯ ರೈತ ಪರ ಹೋರಾಟಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಹೆಮ್ಮಿಗೆ ಹೆಚ್.ಎಸ್.ಚಂದ್ರಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸಂಘದ ಧ್ಯೇಯೋದ್ದೇಶಗಳನ್ನು ತಿಳಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್, ಮಿತ್ರ ಫೌಂಡೇಷನ್ ಅಧ್ಯಕ್ಷ ವಿಜಯ್ ರಾಮೇಗೌಡ, ಮನ್ಮುಲ್ ನಿರ್ದೇಶಕ ಡಾಲು ರವಿ, ಎಂ.ಬಿ.ಹರೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಂಬರೀಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಇಂದ್ರೇಶ್, ಮೂಡಾ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್, ಜಯಕೀರ್ತಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇನಹಳ್ಳಿ ರೇವಣ್ಣ, ತಾ.ಪಂ.ಮಾಜಿ ಸದಸ್ಯ ರಾಜಾಹುಲಿ ದಿನೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಲದೇವ್, ನಿರ್ದೇಶಕರಾದ ಹೆಚ್.ಟಿ.ಲೋಕೇಶ್, ಪುರಸಭಾ ಮಾಜಿ ಅಧ್ಯಕ್ಷ ಕೆ.ಬಿ.ಮಹೇಶ್ಕುಮಾರ್, ತಾಲ್ಲೂಕು ಬಿಜೆಪಿ ಮಾಜಿ ಅಧ್ಯಕ್ಷ ಬೂಕಳ್ಳಿ ಮಂಜುನಾಥ್, ಪುರಸಭಾ ಸದಸ್ಯರಾದ ಬಸ್ ಸಂತೋಷ್, ಡಿ.ಪ್ರೇಂಕುಮಾರ್, ಹೆಚ್.ಆರ್.ಲೋಕೇಶ್, ಕೆ.ಆರ್.ರವೀಂದ್ರಬಾಬು, ನಟರಾಜ್, ಕೆ.ಸಿ.ಮಂಜುನಾಥ್, ತಾಲ್ಲೂಕು ತಹಸೀಲ್ದಾರ್ ಡಾ.ಎಸ್.ಯು ಅಶೋಕ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಆನಂದಕುಮಾರ್, ಪುರಸಭಾ ಮುಖ್ಯಾಧಿಕಾರಿ ಅಶೋಕ್ ಮತ್ತಿತರರು ಭಾಗವಹಿಸುವರು. ಹಾಗಾಗಿ ತಾಲ್ಲೂಕಿನ ಎಲ್ಲಾ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಬೃಹತ್ ರೈತ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಮಂಜುನಾಥ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತಪರ ಹೋರಾಟಗಾರರ ಸಂಘದ ಯವ ಘಟಕದ ಅಧ್ಯಕ್ಷ ರಾಜುಗೌಡ, ಕಾರ್ಯದರ್ಶಿ ಉಮೇಶ್, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಹೆಚ್.ಬಿ.ಪೂರ್ಣಿಮಾ, ಮಹಿಳಾ ಉಪಾಧ್ಯಕ್ಷೆ ಯು.ಸಿ.ಪುಷ್ಪಲತಾ, ಮಹಿಳಾ ಕಾರ್ಯದರ್ಶಿ ಶಾರದಮ್ಮ, ಪದಾಧಿಕಾರಿಗಳಾದ ಜಾನಕಮ್ಮ, ಶಿವಮ್ಮ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
-ಶ್ರೀನಿವಾಸ್ ಆರ್.
