ಕೆ.ಆರ್.ಪೇಟೆ: ತಾಲ್ಲೂಕಿನ ಆಲಂಬಾಡಿ ಕಾವಲು ಗ್ರಾಮದ ಹಿರಿಯ ಮುಖಂಡರು ಹಾಗೂ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಅವರ ಹಿರಿಯ ಸಹೋದರರಾದ ಆಲಂಬಾಡಿ ಕಾವಲು ವಿಷಕಂಠೇಗೌಡ(85) ನಿಧನ ಹೊಂದಿದ್ದಾರೆ.
ಮೃತರಿಗೆ ಪತ್ನಿ ರಾಜಮ್ಮ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಆರ್.ಟಿ.ಓ.ಮಲ್ಲಿಕಾರ್ಜುನ್ ಸೇರಿದಂತೆ ಮೂವರು ಸಹೋದರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಮೃತರ ಅಂತ್ಯಕ್ರಿಯೆಯು ಇಂದು ಸಂಜೆ 4:00ಗೆ ಸ್ವಗ್ರಾಮದಲ್ಲಿರುವ ಮೃತರ ಸ್ವಗ್ರಾಮ ಆಲಂಬಾಡಿಕಾವಲು ಗ್ರಾಮದಲ್ಲಿ ನಡೆಯಿತು.
ಮೃತರ ನಿಧನಕ್ಕೆ ಮಾಜಿ ಸಚಿವರಾದ ಹೆಚ್.ವಿಶ್ವನಾಥ್,ಕೆ.ಆರ್.ಪೇಟೆ ಶಾಸಕ ಹೆಚ್.ಟಿ ಮಂಜು, ಕೆ.ಆರ್.ನಗರ ಕ್ಷೇತ್ರದ ಶಾಸಕ ಡಿ.ರವಿ ಶಂಕರ್, ಶಾಸಕ ಹೆಚ್.ಟಿ.ಮಂಜು ಸೇರಿದಂತೆ ವಿವಿಧ ಗಣ್ಯರು ಹಾಗೂ ಆಲಂಬಾಡಿ ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.
– ಶ್ರೀನಿವಾಸ್ ಆರ್
