ಕೆ.ಆರ್.ಪೇಟೆ: ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಹುಟ್ಟುಹಬ್ಬದ ಹಿನ್ನೆಲೆ,ಪ್ರತಿ ವರ್ಷದಂತೆ ಈ ವರ್ಷವು ಕೂಡ ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲು ನಮ್ಮ ಚಾರಿಟೇಬಲ್ ತೀರ್ಮಾನಿಸಲಾಗಿದೆ,ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ನೋಂದಾಯಿಸಿಕೊಳ್ಳಬೇಕು ಎಂದು ಶ್ರೀ ಮಲ್ಲಿಕಾರ್ಜುನ ಚಾರಿಟೇಬಲ್ ನ ಟ್ರಸ್ಟಿ ಗಂಜಿಗೆರೆ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಟ್ಟಣದ ಶ್ರೀ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ಕಚೇರಿಯಲ್ಲಿ ಪತ್ರಿಕಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು.ದಿನಾಂಕ: 20-05-2026 ರ ಬುಧವಾರ ಬೆಳಿಗ್ಗೆ 11.ಗಂಟೆಗೆ ಟ್ರಸ್ಟ್ ನ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ (ರಿ) ಕಛೇರಿಯಲ್ಲಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ನೋಂದಾಯಿಸಿಕೊಳ್ಳಲು ದಿನಾಂಕ 27/04/2026 ರಿಂದ 16/5/2026 ಸಂಜೆ 6 ಗಂಟೆಯ ವರೆಗೆ ಅವಕಾಶ ಕಲ್ಪಿಸಿದ್ದು,ತಾಲ್ಲೂಕಿನ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳು 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಸ್ಟೇಟ್ ಸಿಲಬಸ್ (ರಾಜ್ಯ ಪಠ್ಯಕ್ರಮ) ಪರೀಕ್ಷೆಯಲ್ಲಿ ಶೇ95% ಅಂಕಗಳು, ಎಸ್.ಎಸ್.ಎಲ್.ಸಿ ಸಿಬಿಎಸ್ ಸಿ (ಕೇಂದ್ರೀಯ ಪಠ್ಯಕ್ರಮ) ಪರೀಕ್ಷೆಯಲ್ಲಿ ಶೇ 85% ಅಂಕಗಳು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಐಸಿಐಸಿ ಶೇ 85% ರಷ್ಟು ಅಂಕಗಳನ್ನು ಪಡೆದಿರುವ ಹಾಗೂ ಪರೀಕ್ಷೆಯಲ್ಲಿ 2025-26 (ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗ) ಶೇ90% ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.ತಾಲ್ಲೂಕಿನ ಸರ್ಕಾರಿ ಹಾಗೂ ಅನುಧಾನಿತ ಪ್ರೌಢ ಶಾಲೆಗಳಲ್ಲಿ ಶಾಲಾ ಹಂತದಲ್ಲಿ ಮತ್ತು ಸರ್ಕಾರಿ ಹಾಗೂ ಅನುಧಾನಿತ ಪದವಿ ಪೂರ್ವ ಕಾಲೇಜಿನ ಕಾಲೇಜು ಹಂತದಲ್ಲಿ ಅತೀ ಹೆಚ್ಚು ಅಂಕ ಪಡೆದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.ಪ್ರತಿಭಾ ಪುರಸ್ಕಾರ ಸಮಾರಂಭದ ದಿವ್ಯಸಾನಿಧ್ಯವನ್ನು ತುಮಕೂರಿನ ಸಿದ್ದಗಂಗೆ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಶ್ರೀಶ್ರೀ ಶ್ರೀ ಸಿದ್ಧಲಿಂಗ ಸ್ವಾಮೀಜಿ ರವರು ಹಾಗೂ ವಿವಿಧ ಮಠಗಳ ಸ್ವಾಮೀಜಿರವರು ಹಾಗೂ ಗಣ್ಯರು ಭಾಗವಹಿಸುತ್ತಾರೆ.ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು
ಅರ್ಜಿ ನಮೂನೆ (ಕಛೇರಿಯಲ್ಲಿ ಪಡೆದುಕೊಳ್ಳುವುದು) ದೃಢೀಕೃತ ಅಂಕ ಪಟ್ಟಿ, ಆದಾರ್ ಕಾರ್ಡ್, ಪ್ರತಿಭಾವಂತ ವಿದ್ಯಾರ್ಥಿಗಳ 3 ಪೋಟೊ ಸಲ್ಲಿಸಬೇಕು ಎಂದು ಮಾಹಿತಿನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಸುಜೇಂದ್ರ ಕುಮಾರ್,ಜಿಲ್ಲಾ ಜನಜಾಗೃತಿ ಉಪಾಧ್ಯಕ್ಷೆ ನಳಿನಿ, ಉದಯ ರವಿ ಟ್ರಸ್ಟ್ ಅಧ್ಯಕ್ಷ ಸೋಮಶೇಖರ್,ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಶ್ವಿ,ಮಾಜಿ ಅಧ್ಯಕ್ಷ ಕೆ ಆರ್ ನೀಲಕಂಠ,ಹಿರಿಯ ಪತ್ರಕರ್ತ ಹರಿಚರಣ ತಿಲಕ್,ಪ್ರೊ. ಚಾ.ಶಿ ಜಯಕುಮಾರ್,ಕಾರ್ಯ ನಿರತ ಪತ್ರಕರ್ತ ಸಂಘ ಅಧ್ಯಕ್ಷ ಟಿ.ವೈ ಆನಂದ್,ಶಿಕ್ಷಕ ಸಂಣ್ಣೆಗೌಡ, ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ
