ಕೆ.ಆರ್.ಪೇಟೆ,ಅ.03: ಮಂಡ್ಯ ಜಿಲ್ಲಾ ಕುರುಬರ ಸಂಘದ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಶೇ.90ರಷ್ಟು, ದ್ವೀತೀಯ ಪಿಯುಸಿಯಲ್ಲಿ ಶೇ.85ರಷ್ಟು ಅಂಕ ಪಡೆದಿರುವ ಕುರುಬ/ಹಾಲುಮತ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲು ನಿರ್ಧರಿಸಲಾಗಿದ್ದು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಆರ್.ಪೇಟೆ ಎಂ.ಜೆ.ಶಶಿಧರ್ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 2024-25ಸಾಲಿನಲ್ಲಿ ಎಸ್.ಎಸ್.ಎಲ್.ಸಿ(ಶೇ.90ರಷ್ಟು ಅಂಕ ಪಡೆದವರು) ಮತ್ತು ಪಿಯುಸಿ ಶೇ.85ರಷ್ಟು ಅಂಕ ಪಡೆದು ಉತ್ತೀರ್ಣ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿಹೊಂದಿಗೆ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ದೃಢೀಕರಣ ಪತ್ರಗಳ ಜೆರಾಕ್ಸ್ ಪ್ರತಿಗಳೊಂದಿಗೆ ಎರಡು ಪೋಟೋದೊಂದಿಗೆ ಇದೇ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಇದನ್ನು ಓದಿ: ಶಾಸಕ ಹೆಚ್.ಟಿ.ಮಂಜು ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
ಎಲ್ಲಾ ಜೆರಾಕ್ಸ್ ದಾಖಲಾತಿಗಳಿಗೆ ಸ್ವಯಂ ದೃಢೀಕರಣ(ವಿದ್ಯಾರ್ಥಿಗಳ ಸಹಿ) ಇರಬೇಕು. ಅರ್ಹ ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು ಎಂ.ಜೆ.ಶಶಿಧರ್, ಪ್ರಧಾನ ಕಾರ್ಯದರ್ಶಿಗಳು, ಮಂಡ್ಯ ಜಿಲ್ಲಾ ಕುರುಬರ ಸಂಘ, ಕುರುಬರ ಹಾಸ್ಟೆಲ್ ಕಟ್ಟಡ, ಬಿ.ಎಂ.ರೋಡ್, ಪಿಇಎಸ್ ಕಾಲೇಜು ಎದುರು, ಮಂಡ್ಯ. ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ಸಲ್ಲಿಸುವಂತೆ ಎಂ.ಕೆ.ಶಶಿಧರ್ ಕೋರಿದ್ದಾರೆ. ಹೆಚ್ಚಿನ ವಿವರಗಳಿಗೆ ಮೊಬೈಲ್ 9964568509 ಸಂಖ್ಯೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.
