ಕೆ.ಆರ್.ಪೇಟೆ,ಡಿ.24: ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಮಧು.ಜಿ.ಮಾದೇಗೌಡ ಅವರ 61ನೇ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷಮ್ಮ ಸ್ಮಾರಕ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಬೇಗ ಗುಣಮುಖರಾಗುವಂತೆ ಹಾರೈಸಿದರು.

ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ನೇತೃತ್ವದಲ್ಲಿ ಆಸ್ಪತ್ರೆಯಲ್ಲಿ ಎಲ್ಲಾ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಪರಿಷತ್ ಸದಸ್ಯರಾದ ಮಧು.ಜಿ.ಮಾದೇಗೌಡ ಅವರು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳ ಪದವೀಧರ ಮತದಾರರಿಂದ ಆಯ್ಕೆಯಾಗುವ ಮೂಲಕ ನಾಲ್ಕು ಜಿಲ್ಲೆಗಳ ಪದವೀಧರರ ಸಮಸ್ಯೆಗಳಿಗೆ ಸದನದಲ್ಲಿ ಸ್ಪಂಧಿಸುವ ಮಾಡುವ ಮೂಲಕ ಕ್ಷೇತ್ರದ ಗೌರವವನ್ನು ಹೆಚ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಲೋಕಸಭಾ ಸದಸ್ಯರಾಗಿ ಹಾಗೂ ರಾಜ್ಯದಸಚಿವರಾಗಿ ಕೆಲಸ ಮಾಡುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ನೇತೃತ್ವ ವಹಿಸಿದ್ದ ಎ.ಬಿ.ಕುಮಾರ್ ಹಾರೈಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ಗ್ರಾ.ಪಂ.ಮಾಜಿ ಅಧ್ಯಕ್ಷ ಎ.ಬಿ.ಹಳ್ಳಿ ನಂಜುಂಡೇಗೌಡ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಅರೆಬೊಪ್ಪನಹಳ್ಳಿ ರಮೇಶ್, ಗ್ರಾ.ಪಂ.ಸದಸ್ಯ ಹೆಮ್ಮಡಹಳ್ಳಿ ತಿಮ್ಮೇಗೌಡ, ತಾಲ್ಲೂಕು ಮಧು.ಜಿ.ಮಾದೇಗೌಡರ ಅಭಿಮಾನಿ ಬಳಗದ ಸದಸ್ಯರಾದ ಬಳ್ಳೇಕೆರೆ ವಿಜಯ್ಕುಮಾರ್, ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ಕೊಮ್ಮೇನಹಳ್ಳಿ ಅನಿಲ್ಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಶಿವಮ್ಮ, ಬೂಕನಕೆರೆ ರೂಪಾ, ಬೊಮ್ಮೇನಹಳ್ಳಿ ಲತಾ, ಮಕ್ಕಳ ತಜ್ಞವೈದ್ಯರಾದ ಡಾ.ಶಿವಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

– ಶ್ರೀನಿವಾಸ್ ಆರ್.
