ಕೆ.ಆರ್.ಪೇಟೆ: ಪ್ರಾಥಮಿಕ ಹಂತದಲ್ಲೆ ವಿದ್ಯಾರ್ಥಿಗಳ ವ್ಯವಹಾರ ಜ್ಞಾನವನ್ನು ಗುರುತಿಸಲು ಮಕ್ಕಳ ಸಂತೆ ಕಾರ್ಯಕ್ರಮ ಸಹಕಾರಿಯಾಗಿದೆ. ಮಕ್ಕಳಿಗೆ ಪಠ್ಯ ಚಟುವಟಿಕೆಗಳ ಜತೆಗೆ ಸಹಪಠ್ಯ ಚಟುವಟಿಕೆಗಳನ್ನು ನಡೆಸುವುದರಿಂದ ಅವರ ಬೌದ್ಧಿಕ ಜ್ಞಾನ ವಿಕಾಸ ಮತ್ತು ವ್ಯಕ್ತಿತ್ವ ರೂಪುಗೊಳ್ಳುವುದಕ್ಕೆ ಸಹಕಾರಿಯಾಗುತ್ತದೆ. ಮಕ್ಕಳಲ್ಲಿ ಲೆಕ್ಕಾಚಾರ ಪ್ರವೃತ್ತಿ ಹಾಗೂ ಗ್ರಾಹಕರೊಂದಿಗೆ ವರ್ತಿಸುವ ವ್ಯವಹಾರ ಜ್ಞಾನ ಹೆಚ್ಚುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಹೇಳಿದರು.
ತಾಲ್ಲೂಕಿನ ಕಸಬಾ ಹೋಬಳಿಯ ಕಾಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಸಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು
ಪ್ರತಿವರ್ಷದಂತೆ ಈ ವರ್ಷವು ಮಕ್ಕಳಿಗೆ ವ್ಯವಹಾರ ಅಧ್ಯಯನವನ್ನು ಮತ್ತು ಗಣಿತದ ಮೂಲ ಕ್ರೀಯೆಗಳನ್ನು ಪ್ರಾಯೋಗಿಕವಾಗಿ ತಿಳಿಸುವ ಸಲುವಾಗಿ ಮಕ್ಕಳ ಸಂತೆಯನ್ನು ಹಮ್ಮಿಕೊಳ್ಳಲಾಗಿದೆ,ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ವಿವಿಧ ರೀತಿಯ ತಿಂಡಿ ತಿನಿಸು, ವಿವಿಧ ಬಗೆಯ ತರಕಾರಿಗಳು. ಹಣ್ಣು ಹಂಪಲು. ಪಾನಿಪುರಿ. ಸಲಾಡ್. ಚಹಾ ಬಿಸ್ಕತ್ತ ಸೇರಿದಂತೆ ಇತರ ಪದಾರ್ಥಗಳನ್ನು ಮಾರಾಟ ಮಾಡಿ ಸಂಭ್ರಮಿಸಿದರು. ಪಾಲಕರು ಮಕ್ಕಳು ತಯಾರಿಸಿದ ಪದಾರ್ಥಗಳ ರುಚಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತರಕಾರಿ, ತಂಪು ಪಾನೀಯ, ಪಾನಿಪುರಿ, ಬೇಲ್ ಪುರಿ, ಸೊಪ್ಪು ಮತ್ತಿತರೆ ಪದಾರ್ಥಗಳನ್ನು ಪಾಲಕರು ಮಕ್ಕಳಿಂದ ಖರೀದಿಸಿ ಪಾಲಕರು ಮಕ್ಕಳ ವ್ಯವಹಾರ ಜ್ಞಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕೆ ಆರ್ ಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಎಸ್ಸಿ ಎಸ್ಟಿ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಶಿಕ್ಷಕ ಯೋಗೇಶ್, ಶಿಕ್ಷಣ ಸಂಯೋಜಕ ಸುರೇಶ ಎಂ.ಎಸ್,ಸಿ.ಆರ್.ಪಿ ನಾಗೇಂದ್ರ ಕೆ ಎಂ, ಮುಖ್ಯ ಶಿಕ್ಷಕ ಗೋಪಾಲಕೃಷ್ಣ, ಶಿಕ್ಷಕರಾದ ಜಯರಾಮು,ಜಿ. ಮಹೇಶ್, ಎಚ್. ಬಿ ಅರುಣ್, ಕುಮಾರ್ ಎಂ ,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ,ಸದಸ್ಯರು ಹಾಗೂ ಪೋಷಕರು ಹಾಜರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
