ಕೆ.ಆರ್.ಪೇಟೆ: ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯವು ಉತ್ತಮವಾಗಿರುತ್ತದೆ.ಹಾಗಾಗಿ ಪ್ರತಿಯೊಬ್ಬರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಶ್ರೀ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ನ ಟ್ರಸ್ಟಿ ಗಂಜಿಗೆರೆ ಮಹೇಶ್ ತಿಳಿಸಿದರು.
ತಾಲ್ಲೂಕಿನ ಸಂತೆಬಾಚಹಳ್ಳಿ ಹೋಬಳಿಯ ಹರಿಯಲ್ಲದಮ್ಮ ದೇವಸ್ಥಾನ ಬಳಿ ಜ್ಞಾನ ದೇಗುಲ ಪ್ರೌಢಶಾಲೆ ಆವರಣದಲ್ಲಿ ಶ್ರೀ ಹರಿಯಾಲದಮ್ಮ ಬಾಯ್ಸ್ ಕ್ರಿಕೆಟರ್ಸ್ ವತಿಯಿಂದ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಸಮಾಜ ಸೇವಕ ಆರ್ಟಿಓ ಮಲ್ಲಿಕಾರ್ಜುನ್ ರವರ ಅನುಪಸ್ಥಿತಿಯಲ್ಲಿ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಯೂ ಜೀವನದ ಒಂದು ಭಾಗವಾಗಿದ್ದು ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುತ್ತದೆ. ನೀತಿ ನಿಯಮಗಳ ಸಂವಹನೆಯೊಂದಿಗೆ ಶಿಸ್ತಿನ ಅರಿವು ಉಂಟಾಗುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಹೆಚ್ಚಿಸುತ್ತದೆ. ಹಾಗೆಯೇ ಇದರಿಂದ ಮನಸ್ಸಿನ ನಾಗಾಲೋಟದ ಕೌಶಲತೆ ವೃದ್ಧಿಸುತ್ತದೆ.ಅದನ್ನು ಜೀವನದ ಒಂದು ಭಾಗವೆಂದು ಪರಿಗಣಿಸುವುದರಿಂದ ಒತ್ತಡದ ಜೀವನದಿಂದ ಹೊರಬರಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಪತ್ರಕರ್ತ ಕಾಮನಹಳ್ಳಿ ಮಂಜುನಾಥ್,ಶಂಕರೇಗೌಡ ಸಂತೋಷ್ ಕುಮಾರ್ ಸೈಯದ್ ದಿಲೀಪ್, ಕ್ರೀಡಾ ಆಯೋಜಕರಾದ ವಾಸು,ಮುನಿರಾಜು,ಉಮೇಶ, ಸೈಯದ್ ರಹಿಮ,ಮೊಹಮ್ಮದ್ ಆಸಿಫ್,ಮೊಹಮ್ಮದ್ ಅನು ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
